ಜುಲೈ 22ರಂದು ಉಚಿತ ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ಜಿಲ್ಲಾಸ್ಪತ್ರೆ, ನಗರಸಭೆ, ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಇದೇ ಜುಲೈ 22ರಂದು ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಚಿತ್ರದುರ್ಗ ನಗರದ ಭೀಮಸಮುದ್ರ ರಸ್ತೆಯ ಬಿ.ವಿ.ಕೆ.ಎಸ್. ಲೇ-ಔಟ್‍ನ ಬರಗೇರಮ್ಮ ಶಾಲಾ ಮುಂಭಾಗದಲ್ಲಿ ಬೃಹತ್ ಉಚಿತ ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರಹಮ್ಮಿಕೊಳ್ಳಲಾಗಿದೆ.
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಉದ್ಘಾಟನೆ ನೆರವೇರಿಸುವರು. ಚಲನಚಿತ್ರ ಕಲಾವಿದ ದೊಡ್ಡಣ್ಣ ಘನ ಉಪಸ್ಥಿತಿವಹಿಸುವರು.

ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ ಅಧ್ಯಕ್ಷತೆ ವಹಿಸುವರು. ವಿಶೇಷ ಆಹ್ವಾನಿತರಾಗಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಸ್ಥಾಯಿ ಸಮಿತಿ ಅಧ್ಯಕ್ಷ ನಸ್ರುಲ್ಲಾ, 9ನೇ ವಾರ್ಡ್ ನಗರಸಭೆ ಸದಸ್ಯ ಲಕ್ಷಮ್ಮ, ಜಿಲ್ಲಾ ಗಾಣಿಗರ ಸಂಘದ ಅಧ್ಯಕ್ಷ ಡಿ.ಎಸ್.ಸುರೇಶ್ ಬಾಬು (ಸೈಟ್ ಬಾಬಣ್ಣ), ನಗರಸಭೆ ನಾಮನಿರ್ದೇಶನ ಸದಸ್ಯ ಬಿ.ವಿ.ಕಾರ್ತಿಕ್, ಮುಖಂಡ ಶ್ರೀರಾಮ್ ಭಾಗವಹಿಸುವರು.

- Advertisement - 

ಗೌರವಾನ್ವಿತ ಅತಿಥಿಗಳಾಗಿ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಡಿಹೆಚ್‍ಒ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ, ಜಿಲ್ಲಾ ಅಂಧತ್ವ ನಿವಾರಣಾಧಿಕಾರಿ ಡಾ.ಜಿ.ಓ.ನಾಗರಾಜ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಭಾಗಹಿಸುವರು.

ಹೆಚ್ಚಿನ ಮಾಹಿತಿಗಾಗಿ ಶಾಸಕರ ಕಾರ್ಯಾಲಯ ದೂರವಾಣಿ ಸಂಖ್ಯೆ 7996768003, 9591515031, ಶಂಕರ ಕಣ್ಣಿನ ಆಸ್ಪತ್ರೆ-8069038900 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

- Advertisement - 

 

 

Share This Article
error: Content is protected !!
";