ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ, ಹಜ್ ಸಮಿತಿ ಸಹಯೋಗದೊಂದಿಗೆ ಬುಧವಾರ ನಗರದ ಎಂ.ಕೆ.ಪ್ಯಾಲೇಸ್ ಸಭಾಂಗಣದಲ್ಲಿ ಜಿಲ್ಲೆಯ 99 ಹಜ್ ಯಾತ್ರಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿ, ವಿವಿಧ ಲಸಿಕೆಗಳನ್ನು ನೀಡಲಾಯಿತು.
ಹಜ್ ಯಾತ್ರಾರ್ಥಿಗಳಿಗೆ ಓರಲ್ ಪೋಲಿಯೋ, QMMV (Quadrivalent meningococcal meningitis vaccine) ಲಸಿಕೆ ಹಾಗೂ 65 ವರ್ಷ ಮೇಲ್ಪಟ್ಟ 24 ಯಾತ್ರಾರ್ಥಿಗಳಿಗೆ ಹೈ ರಿಸ್ಕ್ ಸೀಜನಲ್ ಇನ್ಫೂಯಂಜಾ ಲಸಿಕೆ ನೀಡಲಾಗಿದೆ.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಜಿಲ್ಲಾ ಹಜ್ ಸಮಿತಿ ವ್ಯವಸ್ಥಾಪಕ ಹಾಜಿ ದಾದಪೀರ್, ರಾಜ್ಯ ಹಜ್ ಸಮಿತಿ ಸಂಯೋಜಕ ಸೈಯದ್ ನಾಸಿರ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ. ರವೀಂದ್ರ, ವೈದ್ಯರಾದ ಡಾ.ಸತೀಶ್, ಡಾ.ಶಿಲ್ಪಾ, ಡಾ.ಬಿಲಾಲ್,
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಜಿಲ್ಲಾ ಲಸಿಕಾ ವ್ಯಪಸ್ಥಾಪಕ ವೀರೇಶ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಎಂ.ಗಂಗಾಧರ್, ಗುರುಮೂರ್ತಿ, ಸಮುದಾಯ ಆರೋಗ್ಯಾಧಿಕಾರಿಗಳು ಫಾರ್ಮಸಿ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.