ವೀರಾಪುರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ಗ್ರಾಮಾಂತರ ಭಾಗದ ವೀರಾಪುರ ಗ್ರಾಮದಲ್ಲಿ ಬೆಂಗಳೂರಿನ ಹೆಸರಾಂತ ವೈದೇಹಿ ಆಸ್ಪತ್ರೆಯಿಂದ
ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿ ಸಹಯೋಗದೊಂದಿಗೆ ವೀರಾಪುರ ಗ್ರಾಮದ ಶಾಲಾ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು.

ಶಿಬಿರದಲ್ಲಿ ಹೃದಯರೋಗ, ನರರೋಗ, ಕಿಡ್ನಿಯಲ್ಲಿ ಕಲ್ಲು, ಮೂತ್ರಕೋಶ, ಮತ್ತು ಮೂತ್ರಪಿಂಡಕ್ಕೆ ಸಂಬಂದಿಸಿದ ಕಾಯಿಲೆಗಳು, ಕ್ಯಾನ್ಸರ್‌, ಮೂಳೆಶಾಸ್ತ್ರ, ಕಿವಿ, ಮೂಗು, ಗಂಟಲು, ಹಾಗೂ ಸ್ತ್ರೀ ರೋಗ ಸಂಬಂದಿಸಿದ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಯಿತು. ಶಿಬಿರದಲ್ಲಿ ವೀರಾಪುರ ಗ್ರಾಮದ ಸುತ್ತಮುತ್ತಲಿನ ಗ್ರಾಮದ ಸಾರ್ವಜನಿಕರು ಪಾಲ್ಗೊಂಡಿದ್ದರು.

ಶಿಬಿರದಲ್ಲಿ ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿಯ ಅಧಿಕಾರಿಗಳು ಸೇರಿದಂತೆ ಗ್ರಾಮಪಂಚಾಯಿತಿ ಅಧ್ಯಕ್ಷೆ ನೀಲಮ್ಮ ಪಿಳ್ಳೇಗೌಡ ಸೇರಿದಂತೆ ವೈದೇಹಿ ಆಸ್ಪತ್ರೆಯ ವೈದ್ಯ ಡಾ.ಯೋಗೇಶ್, ಡಾ.ಶ್ವೇತ, ಡಾ.ನಮ್ರತಾ, ಡಾ ಶ್ರಿಯಾ, ಕ್ಯಾಂಪ್ ಮುಖಂಡ ಸುರೇಶ್, ವೀರಾಪುರ ಗ್ರಾಮದ ಮುಖಂಡ ಪಿಳ್ಳೇಗೌಡ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹನುಮಂತಪ್ಪ ಮತ್ತಿತರರು ಭಾಗವಹಿಸಿ ಆರೋಗ್ಯ ಶಿಬಿರ ಯಶಸ್ವಿಗೊಳಿಸಿದರು.

 

Share This Article
error: Content is protected !!
";