ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ನಗರದ ಹೊರವಲಯದ ನರಹರಿ ನಗರದ ಶ್ರೀನರಹರೇಶ್ವರ ದೇವಾಲಯದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ಆಯುಷ್ ವೈದ್ಯಾಧಿಕಾರಿಗಳ ಸಂಘ, ಚಿತ್ರದುರ್ಗ ಜಿಲ್ಲಾ ಘಟಕ, ಬಾಪೂಜಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಶ್ರೀನರಹರಿ ಸೇವಾ ಪ್ರತಿಷ್ಠಾನ, ನಾಗ ಸಿಂಹಾದ್ರಿ ಚಾರಿಟೀಸ್ ಸಹಯೋಗದಲ್ಲಿ “ಉಚಿತ ಆರೋಗ್ಯ ತಪಾಸಣಾ ಶಿಬಿರ”ವನ್ನು ಫೆಬ್ರವರಿ 20ರ ಶುಕ್ರವಾರ ಸಂಜೆ 4 ಗಂಟೆಗೆ ಉದ್ಘಾಟನಾ ಸಮಾರಂಭದೊಂದಿಗೆ ಆರಂಭವಾಗಲಿದೆ.
ಮುಖ್ಯ ಅತಿಥಿಗಳಾಗಿ ಡಾ.ಚಂದ್ರಕಾಂತ ನಾಗಸಮುದ್ರ, ಡಾ.ಸಿ.ಟಿ.ಬಸವರಾಜಪ್ಪ, ಡಾ.ಉದಯ ಭಾಸ್ಕರ್ ಪಾಲ್ಗೊಳ್ಳಲಿದ್ದಾರೆ.
21ರ ಶನಿವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದ್ದು ಸಂಜೆ 5 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಶ್ರೀಶಾರದಾಶ್ರಮದ ಅಧ್ಯಕ್ಷೆ ಮಾತಾಜೀ ತ್ಯಾಗಮಯೀ ಅವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡುವರು.
ಆರೋಗ್ಯ ಶಿಬಿರದಲ್ಲಿ ವಿವಿಧ ತಜ್ಞ ವೈದ್ಯರು ಭಾಗವಹಿಸಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಶ್ರೀನರಹರಿ ಸದ್ಗುರು ಆಶ್ರಮದ ಪೀಠಾಧ್ಯಕ್ಷರಾದ ಪೂಜ್ಯ ವೈ ರಾಜಾರಾಮ್ ಗುರುಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 7204351903, 9900114909 ದೂರವಾಣಿ ಸಂಖ್ಯೆಗಳಿಗೆ ಕರೆಮಾಡಿ ನೋಂದಾಯಿಸುವಂತೆ ಸಂಘಟಕರು ಕೋರಿದ್ದಾರೆ.

