ಜಿಲ್ಲಾ ಆಸ್ಪತ್ರೆಯಲ್ಲಿ ಮಕ್ಕಳ ಉಚಿತ ಹೃದಯ ತಪಾಸಣೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಸ್ಪತ್ರೆ ಮತ್ತು ದಾವಣಗೆರೆ ಎಸ್.ಎಸ್. ನಾರಾಯಣ ಹೆಲ್ತ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ
, ಜಿಲ್ಲಾಸ್ಪತ್ರೆ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪ್ರತಿ ತಿಂಗಳ ಬುಧವಾರ ಉಚಿತವಾಗಿ ಮಕ್ಕಳ ಹೃದಯ ತಪಾಸಣೆ ನಡೆಸಲಾಗುವುದು. ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:00 ಗಂಟೆವರೆಗೆ ಪ್ರಖ್ಯಾತ ಮಕ್ಕಳ ಹೃದಯ ತಜ್ಞ ಡಾ.ಅನಿಲ್ ಕುಮಾರ್ ಜಿ.ಎಸ್. ತಪಾಸಣೆ ನಡೆಸುವರು. ಮಕ್ಕಳಲ್ಲಿ ಪದೇ ಪದೇ ಕಾಣಿಸಿಕೊಳ್ಳುವ ಸೋಂಕು ಹಾಗೂ ಚರ್ಮ ಮತ್ತು ತುಟಿಗಳು ನೀಲಿ ಬಣ್ಣಕ್ಕೆ ತಿರುಗುವುದು.

ಉಸಿರಾಟದಲ್ಲಿ ತೊಂದರೆ ಅಥವಾ ಏದುಸಿರು ಬಿಡುವುದು. ಅನಿಯಮಿತ ಹೃದಯ ಬಡಿತ. ಮರುಕಳಿಸುವ ಕೆಮ್ಮುನಂತಹ ಲಕ್ಷಣ ಕಂಡುಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಈ ಉಚಿತ ಸೇವೆಯ ಸದುಪಯೋಗ ಪಡಿಸಿಕೊಳ್ಳವಂತೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ. ರವೀಂದ್ರ ತಿಳಿಸಿದ್ದಾರೆ.

- Advertisement - 

 

- Advertisement - 
Share This Article
error: Content is protected !!
";