ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ಯುವನಿಧಿ ಫಲಾನುಭವಿಗಳು ಉಚಿತ ಕೌಶಲ್ಯ ತರಬೇತಿಗಾಗಿ ತಮ್ಮ ತಾಲ್ಲೂಕಿನ ಸಮೀಪದ ಐಟಿಐ, ಜಿಟಿಟಿಸಿ, ಸಿಡಾಕ್ ತರಬೇತಿ ಸಂಸ್ಥೆಗಳನ್ನು ನೇರವಾಗಿ ಸಂಪರ್ಕಿಸಿ ವಿವಿಧ ಕೌಶಲ್ಯ ತರಬೇತಿ ಪಡೆಯುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಜಿಲ್ಲೆಯ ಎಲ್ಲಾ ಯುವನಿಧಿ ಫಲಾನುಭವಿಗಳು ಯುವನಿಧಿ ಪ್ಲಸ್ ಯೋಜನೆಯಡಿ ಕೌಶಲ್ಯ ತರಬೇತಿ ಪಡೆಯಲು ತಮ್ಮ ತಾಲ್ಲೂಕಿನ ಸಮೀಪದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು (ಐಟಿಐ), ಸಿಡಾಕ್ ತರಬೇತಿ ಸಂಸ್ಥೆ,
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ಗಳ ತರಬೇತಿ ಸಂಸ್ಥೆಗಳನ್ನು ಇದೇ ನ.24ರೊಳಗೆ ನೇರವಾಗಿ ಸಂಪರ್ಕಿಸಿ ಸ್ವ ವಿವರಗಳೊಂದಿಗೆ ನೋಂದಾಯಿಸುವ ಮೂಲಕ ಉಚಿತವಾಗಿ ವಿವಿಧ ಕೌಶಲ್ಯ ತರಬೇತಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಟೇಶ್ ಕೋರಿದ್ದಾರೆ.

