ಕೆಎಎಸ್, ಎಫ್‌ಡಿಎ ಮತ್ತು ಎಸ್‌ಡಿಎ ಹುದ್ದೆಗೆ ಉಚಿತ ತರಬೇತಿ

News Desk

ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾ ಖನಿಜ ಪ್ರತಿಷ್ಠಾನ ಅನುದಾನದಡಿ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಗೆ ಕೆಎಎಸ್, ಎಫ್‌ಡಿಎ ಮತ್ತು ಎಸ್‌ಡಿಎ ಹುದ್ದೆಗೆ ಆಯ್ಕೆಯಾಗಲು ಉಚಿತ ತರಬೇತಿ ನೀಡಲು ಈಗಾಗಗಲೇ ನೋಂದಣಿಗೆ ಆಹ್ವಾನಿಸಲಾಗಿದ್ದು, ಲಿಖಿತ ಪರೀಕ್ಷೆಯು ಸೆ.01 ರಂದು ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಅಭ್ಯರ್ಥಿಗಳು ಅರ್ಹತಾ ಪರೀಕ್ಷೆಗೆ ಹಾಜರಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಗಳು: ಬಳ್ಳಾರಿ ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್‌ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸಿರುಗುಪ್ಪದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸಂಡೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುರುಗೋಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಕಂಪ್ಲಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು.

ನೋಂದಾಯಿಸಿಕೊಂಡ ಅಭ್ಯರ್ಥಿಗಳು ಸೆ.01 ರಂದು ಬೆಳಿಗ್ಗೆ 10 ಗಂಟೆಗೆ ಆಯಾ ಕೇಂದ್ರಗಳಲ್ಲಿ ಹಾಜರಿರಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

 

- Advertisement -  - Advertisement - 
Share This Article
error: Content is protected !!
";