ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದ್ವಿತೀಯ ಪಿ.ಯು.ಸಿ ಪರೀಕ್ಷೆ – 02, ಏಪ್ರಿಲ್ 24 ರಿಂದ ಮೇ 08 ರವರೆಗೆ ಪರೀಕ್ಷೆಗಳು ಬೇರೆ ಬೇರೆ ಕಾಲೇಜುಗಳಲ್ಲಿ ನಡೆಯಲಿದ್ದು, ಪರೀಕ್ಷಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಾಂಕಗಳಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ
ಹೋಗುವಾಗ ಮತ್ತು ಹಿಂದಿರುಗುವಾಗ ಬಿಎಂಟಿಸಿ ಬಸ್ಸುಗಳ ಸಾಮಾನ್ಯ ಸೇವೆಗಳಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ದ್ವಿತೀಯ ಪಿ.ಯು.ಸಿ ಪರೀಕ್ಷಾ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಮಾರ್ಗಗಳನ್ನು, ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಲಾಗುವುದು.
ಹೆಚ್ಚುವರಿ ಸುತ್ತುವಳಿಗಳ ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡಲಾಗುವುದು. ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ಪೋಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ, ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.