ದ್ವಿತೀಯ ಪಿಯುಸಿ ಪರೀಕ್ಷೆ-02ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದ್ವಿತೀಯ ಪಿ.ಯು.ಸಿ ಪರೀಕ್ಷೆ – 02, ಏಪ್ರಿಲ್ 24 ರಿಂದ ಮೇ 08 ರವರೆಗೆ ಪರೀಕ್ಷೆಗಳು ಬೇರೆ ಬೇರೆ ಕಾಲೇಜುಗಳಲ್ಲಿ ನಡೆಯಲಿದ್ದು, ಪರೀಕ್ಷಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಾಂಕಗಳಂದು  ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ

- Advertisement - 

ಹೋಗುವಾಗ ಮತ್ತು ಹಿಂದಿರುಗುವಾಗ ಬಿಎಂಟಿಸಿ ಬಸ್ಸುಗಳ ಸಾಮಾನ್ಯ ಸೇವೆಗಳಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

- Advertisement - 

ದ್ವಿತೀಯ ಪಿ.ಯು.ಸಿ ಪರೀಕ್ಷಾ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಮಾರ್ಗಗಳನ್ನು, ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಲಾಗುವುದು.

ಹೆಚ್ಚುವರಿ ಸುತ್ತುವಳಿಗಳ ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡಲಾಗುವುದು. ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ಪೋಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ, ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

- Advertisement - 

 

Share This Article
error: Content is protected !!
";