ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಸರ್ಕಾರದ “ಆಯುಷ್ಮಾನ್ ಭಾರತ್”ಯೋಜನೆಯಡಿಯಲ್ಲಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆರೋಗ್ಯ ಸೇವಾ ಭದ್ರತೆ ಒದಗಿಸುವ ನಿಟ್ಟಿನಲ್ಲಿ ನೋಂದಾಯಿತ ಆಸ್ಪತ್ರೆಗಳಲ್ಲಿ ವಾರ್ಷಿಕ ಗರಿಷ್ಠ 5 ಲಕ್ಷದ ವರೆಗೂ ಉಚಿತ ಚಿಕಿತ್ಸೆ ದೊರಕಲಿದೆ ಎಂದು ಸಂಸದರಾದ ಡಾ.ಸಿ.ಎನ್.ಮಂಜುನಾಥ್ ಹೇಳಿದರು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಗುರುತಿನ ಚೀಟಿ ಒದಗಿಸುವ ಅಭಿಯಾನ ಮಂಗಳವಾರದಿಂದ ರಾಮನಗರದ ಜಿಲ್ಲಾ ಪಂಚಾಯತ್ ಭವನದಲ್ಲಿರುವ “ಸಂಸದರ ಕಚೇರಿಯಲ್ಲಿ” ನಡೆಯಲಿದೆ ಎಂದು ಸಂಸದರು ತಿಳಿಸಿದರು.
ಎಲ್ಲಾ ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಡಾ.ಸಿ.ಎನ್.ಮಂಜುನಾಥ್ ವಿನಂತಿಸಿಕೊಂಡರು.