ಯುವತಿಗೆ ಡ್ರಗ್ಸ್​​ ನೀಡಿ ಅತ್ಯಾಚಾರ ಎಸಗಿದ ಸ್ನೇಹಿತರು

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ನೇಹಿತರೇ ಯುವತಿಗೆ ಡ್ರಗ್ಸ್​​ ಮಾತ್ರೆ ನೀಡಿ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿರುವುದು ಒಂದು ಕಡೆಯಾದರೆ, ಹನಿಟ್ರ್ಯಾಪ್ ಹೆಸರಿನಲ್ಲಿ ಯುವತಿ ಸ್ನೇಹತರಿಗೆ ಹಣಕ್ಕೆ ಒತ್ತಾಯಿಸಿರುವ ಆರೋಪ ಕೂಡ ಇದೇ ಸಂದರ್ಭದಲ್ಲಿ ಕೇಳಿ ಬಂದಿದೆ.

ಕಳೆದ ಫೆಬ್ರವರಿ 14ರಂದು ಘಟನೆ ನಡೆದಿದೆ ಎನ್ನಲಾಗಿದ್ದು, ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯಾಗಿರುವ 19 ವರ್ಷದ ಯುವತಿ ಅಮೃತಹಳ್ಳಿ ಪೊಲೀಸ್ ಠಾಣೆಗೆ ಸ್ನೇಹಿತರ ಮೇಲೆ ದೂರು ನೀಡಿದ್ದು ದೂರಿನ ಅನ್ವಯ ಡಿಕ್ಸನ್ ಸ್ಯಾಂಡ್ರ ಹಾಗೂ ನಿಖಿಲ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement - 

ಬೆಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ತಮಿಳುನಾಡು ಮೂಲದವರಾಗಿ, ಇನ್​​ಸ್ಟಾಗ್ರಾಂನಲ್ಲಿ ಪಶ್ಚಿಮ ಬಂಗಾಳ ಮೂಲದ ಡಿಕ್ಸನ್ ಪರಿಚಯವಾಗಿತ್ತು. ಸಂತ್ರಸ್ತೆಯ ದೂರಿನ ಅನ್ವಯ, ಪ್ರೀತಿಸುತ್ತಿರುವುದಾಗಿ ಹೇಳಿದ್ದ ಡಿಕ್ಸನ್, ಫೆಬ್ರವರಿ 14ರಂದು ಯುವತಿಯನ್ನು ಜಕ್ಕೂರಿನಲ್ಲಿರುವ ವಿಲ್ಲಾವೊಂದಕ್ಕೆ ಆಹ್ವಾನಿಸಿದ್ದ. ಅದರಂತೆ ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತೆ ವಿಲ್ಲಾಗೆ ಹೋಗಿದ್ದರು. ಈ ವೇಳೆ ಡಿಕ್ಸನ್ ಹಾಗೂ ನಿಖಿಲ್ ಬಲವಂತವಾಗಿ ಮತ್ತು ಬರುವ ಮಾತ್ರೆ ತಿನ್ನಿಸಿದ್ದರು ಎಂದು ಸಂತ್ರಸ್ತೆ ಆರೋಪಿಸಿ ದೂರಿ ನೀಡಿದ್ದಾರೆ.

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತನ್ನ ಮೇಲೆ ಡಿಕ್ಸನ್ ಹಾಗೂ ನಿಖಿಲ್ ಅತ್ಯಾಚಾರ ಎಸಗಿದ್ದಾರೆ. ಬಳಿಕ ನಡೆದ ಘಟನೆಯ ಕುರಿತು ಯಾರಿಗೂ ಹೇಳದಂತೆ ಜೀವ ಬೆದರಿಕೆ ಹಾಕಿದ್ದಾರೆ. ನಡೆದಿರುವ ಘಟನೆಯಿಂದ ತಾನು ಆಘಾತಕ್ಕೊಳಗಾಗಿದ್ದು, ನಂತರ ಸಹೋದರನ ಸೂಚನೆಯಂತೆ ದೂರು ನೀಡುತ್ತಿರುವುದಾಗಿ ಸಂತ್ರಸ್ತೆ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

- Advertisement - 

ಯುವತಿ ವಿರುದ್ಧ ಪ್ರಕರಣ:
ಯುವತಿಯೇ ಸುಳ್ಳು ಆರೋಪ ಮಾಡುತ್ತಿದ್ದು
, ಖಾಸಗಿ ವಾಹಿನಿಯ ಸಿಬ್ಬಂದಿ ಹೆಸರಿನಲ್ಲಿ ಕರೆ ಮಾಡಿಸಿ ಬೆದರಿಸಿ ಹಣಕ್ಕೆ ಬೇಡಿಕೆಯಿಟ್ಟಿರುವ ಆರೋಪ ಕೇಳಿ ಬಂದಿದೆ.

ಯುವತಿಯ ದೂರಿಗೂ ಮೊದಲೇ ನಿಖಿಲ್ ಸಹ ಮಲ್ಲೇಶ್ವರಂ ಠಾಣೆಗೆ ದೂರು ನೀಡಿದ್ದಾರೆ. ಅದರ ಅನ್ವಯ ಆರೋಪಿತ ಯುವತಿ, ಇಮ್ರಾನ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿದೆ.

ಫೆಬ್ರವರಿ 14ರಂದು ಪಾರ್ಟಿಗೆ ಬಂದಿದ್ದ ಯುವತಿ ತಾನೇ ತೀರಾ ಸಲುಗೆಯಿಂದ ವರ್ತಿಸುತ್ತಿದ್ದಳು. ಅದೇ ದಿನ ಆಕೆಯನ್ನು ಸುರಕ್ಷಿತವಾಗಿ ರಾಜಾಜಿನಗರದ ವಾರಿಯರ್ ಬೇಕರಿ ಬಳಿ ಡ್ರಾಪ್ ಮಾಡಿದ್ದೆ. ಆದರೆ ಆ ನಂತರ ಇನ್‌ಸ್ಟಾಗ್ರಾಂ ವಿಡಿಯೋ ಮೂಲಕ ಯುವತಿ ಸುಳ್ಳು ಆರೋಪ ಮಾಡಿದ್ದಾರೆ. ನಂತರ ಖಾಸಗಿ ವಾಹಿನಿಯ ಪ್ರತಿನಿಧಿಯ ಹೆಸರಿನಲ್ಲಿ ಇಮ್ರಾನ್ ಎಂಬಾತ ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿರುವುದಾಗಿ ನಿಖಿಲ್ ದೂರು ನೀಡಿದ್ದಾರೆ. ಸದ್ಯ ಎರಡೂ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿ ತನಿಖೆ ಕೈಗೊಂಡಿದ್ದಾರೆ.

 

Share This Article
error: Content is protected !!
";