ಫಲಪುಷ್ಪ ಪ್ರದರ್ಶನ ಮಾ.01 ರವರೆಗೆ ವಿಸ್ತರಣೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ
, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ತೋಟಗಾರಿಕೆ ಸಂಘ ಇವರ ಸಹಯೋಗದಲ್ಲಿ ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಹಮ್ಮಿಕೊಂಡಿರುವ 33 ನೇ ಫಲಪುಷ್ಪ ಪ್ರದರ್ಶನವನ್ನು ಮಾರ್ಚ್ 01 ರವರೆಗೆ ವಿಸ್ತರಿಸಲಾಗಿದೆ.

     ಫಲಪುಷ್ಪ ಪ್ರದರ್ಶನವನ್ನು ಫೆ. 20 ರಿಂದ 23 ರವರೆಗೆ ಆಯೋಜಿಸಲಾಗಿತ್ತು.  ಈ ಪ್ರದರ್ಶನವು ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆಕಾಶ್ ಅವರ ಸೂಚನೆಯನ್ವಯ ಹೆಚ್ಚಿನ ಸಾರ್ವಜನಿಕರ ವೀಕ್ಷಣೆಗೆ ಅನುಕೂಲವಾಗುವಂತೆ ಫಲಪುಷ್ಪ ಪ್ರದರ್ಶನವನ್ನು ಮಾರ್ಚ್ 01 ರವರೆಗೆ ವಿಸ್ತರಿಸಲಾಗಿದೆ.

- Advertisement - 

ಪ್ರದರ್ಶನವು ಪ್ರತಿ ದಿನ ಸಂಜೆ 5.30 ರಿಂದ ರಾತ್ರಿ 10 ಗಂಟೆಯವರೆಗೆ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರುತ್ತದೆ.  ಅಲ್ಲದೆ ಆಹಾರ ಮಳಿಗೆಗಳ ವ್ಯಾಪಾರಕ್ಕೂ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ತೋಟಗಾರಿಕೆ ಜಂಟಿನಿರ್ದೇಶಕಿ ಸವಿತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";