ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ : ಉತ್ತಮ ಕಾರ್ಯನಿರ್ವಹಣೆಗಾಗಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ರಾಜ್ಯದ ಸಹಕಾರಿ ಕ್ಷೇತ್ರದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದೆ.
ಈ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಮ್.ಮಂಜುನಾಥ್ ಗೌಡ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ನಮ್ಮ ಶಿವಮೊಗ್ಗ ಡಿಸಿಸಿ ಬ್ಯಾಂಕಿನ ಉತ್ತಮ ಕಾರ್ಯನಿರ್ವಹಣೆಗಾಗಿ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ. ಶಿವಮೊಗ್ಗವನ್ನು ರಾಜ್ಯದಲ್ಲಿಯೇ ಪ್ರಥಮ ಸ್ಥಾನಕ್ಕೆ ಆಯ್ಕೆ ಮಾಡಿದ್ದು, ಸೆ. 13 ರಂದು ನಡೆಯಲಿರುವ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇದರ ವಾರ್ಷಿಕ ಮಹಾ ಸಭೆಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಿರುವುದಾಗಿ ಶಿವಮೊಗ್ಗ ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ|| ಆರ್.ಎಂ. ಮಂಜುನಾಥಗೌಡರು ತಿಳಿಸಿದ್ದಾರೆ.
ಈ ದಿನ ಡಿ.ಸಿ.ಸಿ ಬ್ಯಾಂಕಿನ 67 ನೇ ವಾರ್ಷಿಕ ಮಹಾಸಭೆಯ ಸುಸಂದರ್ಭದಲ್ಲಿ ಬ್ಯಾಂಕನ್ನು ರಾಜ್ಯದ ಪ್ರಥಮ ಬ್ಯಾಂಕನ್ನಾಗಿ ಆಯ್ಕೆ ಮಾಡಿರುವುದು ಜಿಲ್ಲೆಯ ರೈತರಿಗೆ ಹಾಗೂ ಗ್ರಾಹಕರಿಗೆ ಸಂದ ಗೌರವವಾಗಿದೆ ಎಂದು ಹರ್ಷ ವ್ಯಕ್ತಪಡಿಸಿ ಈ ಸಂಬಂಧ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಗಮದ ಅಧ್ಯಕ್ಷರು ಹಾಗೂ ಆಡಳಿತ ಮಂಡಲಿ ಸದಸ್ಯರಿಗೆ ಆರ್.ಎಮ್.ಮಂಜುನಾಥ್ ಗೌಡ ಕೃತಜ್ಞತೆ ಸಲ್ಲಿಸಿದ್ದಾರೆ.