ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಳ್ಳಕೆರೆ ತಾಲ್ಲೂಕಿನ ದೊಡ್ಡೇರಿ ಹಾಗೂ ಎನ್.ಮಹದೇವಪುರ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಬುಧವಾರ ಭೇಟಿ ನೀಡಿ,
ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕಾಮಗಾರಿ ಅನುಷ್ಠಾನ ಮಾಡುತ್ತಿರುವ ಕೂಲಿ ಕಾರ್ಮಿಕರೊಂದಿಗೆ ಚರ್ಚಿಸಿ, ಜಾಬ್ ಕಾರ್ಡ್ಗಳನ್ನು ಪರಿಶೀಲನೆ ನಡೆಸಿದರು.
ನಂತರ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು. ಉಪಾಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್, ಸಹಾಯಕ ನಿರ್ದೇಶಕ (ನರೇಗಾ) ಸಂತೋಷ್ ಕುಮಾರ್, ಜಿ.ಪಂನ ಎ.ಡಿ.ಪಿ.ಸಿ ಮೋಹನ್ ಕುಮಾರ್, ತಾಲ್ಲೂಕು ತಾಂತ್ರಿಕ ಸಂಯೋಜಕರು, ಐ.ಇ.ಸಿ ಸಂಯೋಜಕರು, ಗ್ರಾಮ ಪಂಚಾಯತಿಯ ಪಿ.ಡಿ.ಓ, ತಾಂತ್ರಿಕ ಸಹಾಯಕರು, ಬಿ.ಎಫ್.ಟಿ, ಗ್ರಾಮ ಕಾಯಕ ಮಿತ್ರ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.