ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ :
ಶಿವಮೊಗ್ಗದ ಮಲವಗೊಪ್ಪದಲ್ಲಿ ಈ ಬಾರಿ ವಿಶಿಷ್ಟ ರೀತಿಯಲ್ಲಿ ಗಣೇಶೋತ್ಸವ ಆಚರಿಸಲಾಗುತ್ತಿದೆ. ಇಲ್ಲಿನ ಮೂರನೇ ತಿರುವಿನಲ್ಲಿ ಈ ಗಣೇಶನನ್ನು ಕೂಡ್ರಿಸಲಾಗಿದೆ.
ಸರ್ಕಾರಿ ಶಾಲೆ ಉಳಿಸುವ ನಿಟ್ಟಿನಲ್ಲಿ ಇಲ್ಲಿನ ಯುವಕರ ತಂಡ ಮುಂದಾಗಿದೆ. ಸರ್ಕಾರಿ ಶಾಲೆಗಳು ಮುಚ್ಚುವ ಪರಿಸ್ಥಿತಿಗೆ ಬಂದೊದಗಿದೆ. ಹಾಗಾಗಿ ಸರ್ಕಾರಿ ಶಾಲೆಯನ್ನು ಉಳಿಸೋಣ ಎನ್ನುವ ಧ್ಯೇಯವಾಕ್ಯದೊಂದಿಗೆ ಗಣೇಶೋತ್ಸವದ ಸಂದೇಶ ಸಾರಲಾಗುತ್ತಿದೆ.
ಈ ಯುವಕರ ತಂಡ ಉತ್ತಮ ಸಂದೇಶ ನೀಡುವ ಮೂಲಕ ಗಣೇಶ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದೆ, ಗಣೇಶ ಮಂಟಪದಲ್ಲಿ ಸರ್ಕಾರಿ ಶಾಲೆಯ ಪರಿಸ್ಥಿತಿ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಶಾಲೆಯಿಂದ ಓದಿ ಉನ್ನತ ಹುದ್ದೆಗೆ ಏರಿದ ಅಧಿಕಾರಿಗಳು ಸಾಹಿತಿಗಳ ಭಾವಚಿತ್ರವನ್ನು ಮಂಟಪದಲ್ಲಿ ಅಳವಡಿಸಲಾಗಿದೆ. ಇವೆಲ್ಲವೂ ನೋಡುಗರ ಗಮನ ಸೆಳೆಯುತ್ತಿದೆ.