ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಭಾರತ್ ಜೋಡೋ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಪಾಲ್ಗೊಂಡು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು.
ಗಾಂಧಿ ಕುಟುಂಬ ದೇಶಕ್ಕೆ ನೀಡಿದ ಕೊಡುಗೆ ಹಾಗೂ ಅವರು ಮಾಡಿದ ತ್ಯಾಗವನ್ನು ಭಾರತ ಎಂದೂ ಕೂಡ ಮರೆಯುವುದಿಲ್ಲ. ದೇಶದಲ್ಲಿ ಬರಗಾಲ ತಾಂಡವವಾಡುವಾಗ ಜನಪರ ಯೋಜನೆಗಳನ್ನು ಇಂದಿರಾ ಗಾಂಧಿ ಅವರು ಜಾರಿಗೆ ತಂದು ಜನರನ್ನು ಸಂಕಷ್ಟದಿಂದ ಪಾರು ಮಾಡಿದರು ಎಂದು ಡಿ.ಕೆ.ಶಿವಕುಮಾರ್ ಸ್ಮರಿಸಿದರು.
ಇದಲ್ಲದೆ ಉಳುವವನೇ ಭೂಮಿಯ ಒಡೆಯ, ಬ್ಯಾಂಕ್‌ಗಳ ರಾಷ್ಟ್ರೀಕರಣ, ಅಂಗನವಾಡಿ, ಬಡವರಿಗೆ ಮನೆ, ನಿವೇಶನ, ಪಡಿತರ ಯೋಜನೆ ಸೇರಿದಂತೆ ಹಸಿವಿನಿಂದ ಜ್ಞಾನದವರೆಗೂ ಹಲವು ಕಲ್ಯಾಣ ಯೋಜನೆಗಳನ್ನು ಅವರು ಜಾರಿಗೆ ತಂದಿದ್ದಾರೆ.
ಚುನಾವಣೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ ಈ ದೇಶವನ್ನು ಗಟ್ಟಿಗೊಳಿಸುವುದು ಮುಖ್ಯ ಎನ್ನುವ ಇಂದಿರಾ ಗಾಂಧಿ ಅವರ ಮಾತು ಇಂದಿಗೂ ಪ್ರಸ್ತುತ. ಅವರನ್ನು ಸ್ಫೂರ್ತಿ, ಮಾರ್ಗದರ್ಶನವಾಗಿಟ್ಟುಕೊಂಡು ಕಾಂಗ್ರೆಸ್‌ಸರ್ಕಾರ ಇಂದಿರಾ ಕ್ಯಾಂಟೀನ್‌ಹಾಗೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಗ್ಯಾರಂಟಿಗಳು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದು ಎಂದು ಶಿವಕುಮಾರ್ ತಿಳಿಸಿದರು.