ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ
ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಗೌರಿ ಗಣೇಶ ಮೂರ್ತಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಸ್ಥಾಪಿಸಿ ಪೂಜಿಸುವುದು ವಾಡಿಕೆ.
ಇದಕ್ಕೆ ವಿಭಿನ್ನ ಎಂಬಂತೆ ಗಣೇಶೋತ್ಸವ ನಿತ್ಯೋತ್ಸವ ವಾಗುವಂತೆ ನಗರದ ಕೊಂಗಾಡಿಯಪ್ಪ ಕಾಲೇಜ್ ರಸ್ತೆಯ ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿಯಿಂದ ಆಯುಧ ಪೂಜೆ ಹಾಗೂ ವಿಜಯ ದಶಮಿ ಪ್ರಯುಕ್ತ 22ಅಡಿ ಬೃಹತ್ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದು ವಿಶೇಷವಾಗಿತ್ತು.
ಮೂರು ದಿನ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ನಾಲ್ಕನೇ ದಿನ ಊರಿನ ಪ್ರಮುಖ ಬೀದಿಗಳಲ್ಲಿ ವಿಶೇಷ ವಾದ್ಯಗಳೊಂದಿಗೆ ವಿಜೃಂಭಣೆಯಿಂದ ಮೆರವಣಿಗೆ ನಡೆಸಿ ತಿಪ್ಪಾಪುರ ಕೆರೆಯಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು.

