ಚನ್ನಮ್ಮನಾಗತಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಗೌರಮ್ಮ ಅವಿರೋಧ ಆಯ್ಕೆ

News Desk

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ತಾಲ್ಲೂಕಿನ ಪರಶುರಾಮಪುರ ಹೋಬಳಿಯ ಚನ್ನಮ್ಮನಾಗತಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು
, ಅಧ್ಯಕ್ಷರಾಗಿ ಗೌರಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಬಿಇಒ ಕೆ.ಎಸ್.ಸುರೇಶ್ ತಿಳಿಸಿದ್ದಾರೆ.

ಹಿಂದಿನ ಅಧ್ಯಕ್ಷರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನ ತೆರವಾಗಿದ್ದು, ಸದಸ್ಯರ ಒಂಡಬಡಿಕೆಯಂತೆ ಗೌರಮ್ಮ ಮಾತ್ರ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆಯಾಗಿರುತ್ತದೆ.

ಪಿಡಿಒ ಮೋಹನ್‌ದಾಸ್, ಎಂ.ಎ.ತಿಪ್ಫೇಸ್ವಾಮಿ, ಎಂ.ರಾಜಣ್ಣ, ಸಿ.ಜಿ.ಭೀಮಣ್ಣ, ಟಿ.ತ್ಯಾಗರಾಜು, ರಾಧತಿಪ್ಫೇಸ್ವಾಮಿ, ಶಿಲ್ಪಬಸವರಾಜು, ಗೌರಮ್ಮಅಂಜಿನಪ್ಪ, ಜಯಮ್ಮ, ಅನೀಲಾಕ್ಷಿ, ಭಾಗ್ಯಮ್ಮ ಮುಂತಾದವರು ಉಪಸ್ಥಿತರಿದ್ದರು. 

 

Share This Article
error: Content is protected !!
";