ಗೌರಸಮುದ್ರ ಮಾರಮ್ಮ ದೇವಿ ಜಾತ್ರೆ: ಪ್ರಾಣಿಬಲಿ ನಿಷೇಧ

News Desk

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ಗೌರಸಮುದ್ರ ಗ್ರಾಮದ ಗೌರಸಮುದ್ರ ಮಾರಮ್ಮ ದೇವಿ ಜಾತ್ರೆಯು ಇದೇ ಆಗಸ್ಟ್ 25 ಮತ್ತು 26ರಂದು  ನಡೆಯಲಿದ್ದು, ಈ ಜಾತ್ರೆಗೆ ಲಕ್ಷಾಂತರ ಜನ ಭಕ್ತಾದಿಗಳು ಆಗಮಿಸಲಿದ್ದಾರೆ.

ಜಾತ್ರೆಗೆ ಬರುವ ಭಕ್ತಾದಿಗಳು ಜಾತ್ರೆಯಲ್ಲಿ ಯಾವುದೇ ರೀತಿಯ ಪ್ರಾಣಿಬಲಿ ಮಾಡಬಾರದು ಹಾಗೂ ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟ ಆಡಬಾರದೆಂದು ಸಾರ್ವಜನಿಕರಿಗೆ ತಿಳಿಯಪಡಿಸಿದೆ.

- Advertisement - 

ಪ್ರಾಣಿಬಲಿ, ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟವಾಡಿದ ಪಕ್ಷದಲ್ಲಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";