ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆಯ ಕೀ ಉತ್ತರಗಳು ಆಯೋಗದ ಜಾಲತಾಣದಲ್ಲಿ ಲಭ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಸಂಖ್ಯೆ ಪಿ.ಎಸ.ಸಿ 509(1)/2023-24 ದಿನಾಂಕ: 26-02-2024ರಲ್ಲಿ ಅಧಿಸೂಚಿಸಲಾದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಮತ್ತು ಬಿವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಮತೆ ಆಗಸ್ಟ್ 27ರಂದು ನಡೆಸಿದ ಪೂರ್ವಭಾವಿ ಪರೀಕ್ಷೆಯ ಪತ್ರಿಕೆ1 (ವಿಷಯ ಸಂಕೇತ – 578) ಮತ್ತು ಪತ್ರಿಕೆ  2 (ವಿಷಯ ಸಂಕೇತ – 579) ಕೀ ಉತ್ತರಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಕರ್ನಾಟಕ ಲೋಕಸೇವಾ ಆಯೋಗದ ಜಾಲತಾಣ http://kpsc.kar.nic.in ನಲ್ಲಿ ಪ್ರಕಟಿಸಲಾಗಿದೆ.
ಅಭ್ಯಥಿಗಳು ಸಮದರಿ ಕೀ ಉತ್ತರಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಸೂಚನೆಗಳನ್ನು ಹಾಗೂ ನಮೂನೆಯ ಮಾದರಿಯನ್ನು ಆಯೋಗದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿರುತ್ತದೆ. ಅಭ್ಯರ್ಥಿಗಳು ಕಡ್ಡಾಯವಾಗಿ ವೆಬ್ಸೈಟ್ನಲ್ಲಿ ಪ್ರಕಟಿಸಿರುವ ಸೂಚನೆಗಳನ್ವಯ ನಿಗದಿತ ನಮೂನೆಯಲ್ಲಿಯೇ ಆಕ್ಷೇಪಣೆಗಳನ್ನು ಸಲ್ಲಿಸತಕ್ಕದ್ದು.
ಆಕ್ಷೇಪಣೆಗಳನ್ನು ಸೆಪ್ಟೆಂಬರ್ 04 ಸಂಜೆ 5.30 ಗಂಟೆಯೊಳಗೆ ಪರೀಕ್ಷಾ ನಿಯಂತ್ರಕರು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧಬೆಂಗಳೂರು560 001 ಇವರಿಗೆ ಮಾತ್ರ ತಲುಪುವಂತೆ ಕಳುಹಿಸತಕ್ಕದ್ದು. ಅವಧಿಯ ನಂತರ ಸ್ವೀಕರಿಸಲಾಗುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಗಳ ಆಕ್ಷೇಪಣೆಗಳು ಅಂಚೆಯ ಮೂಲಕ ಆಯೋಗಕ್ಕೆ ತಲುಪಲು ವಿಳಂಬವಾದಲ್ಲಿ ಆಯೋಗವು ಜವಬ್ದಾರಿಯಾಗಿರುವುದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";