ಘಾಟಿ ಸುಬ್ರಮಣ್ಯ ಬ್ರಹ್ಮ ರಥೋತ್ಸವ ಸಂಪನ್ನ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದಕ್ಷಿಣ ಭಾರತದ ಐತಿಹಾಸಿಕ ಪ್ರಸಿದ್ದಿ ಪಡೆದ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು.

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಇತಿಹಾಸ ಹಿನ್ನೆಲೆ ಇರುವ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ ಶ್ರೀ ಕ್ರೋಧಿನಾಮ ಸಂವತ್ಸರದ ಪುಷ್ಯ ಶುದ್ಧ ಷಷ್ಠಿ ಡಿ. 25ರ ಗುರುವಾರ ಮಧ್ಯಾಹ್ನ 12-10 ರಿಂದ 12-20 ಗಂಟೆಗೆ ಸಲ್ಲುವ ಶುಭ (ಮೀನ) ಲಗ್ನದಲ್ಲಿ ಅಭಿಜಿನ್ ಮುಹೂರ್ತದಲ್ಲಿ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಹಾಗೂ ಇತರರು ಚಾಲನೆ ನೀಡಿದರು.

- Advertisement - 

ಬ್ರಹ್ಮ ರಥೋತ್ಸವ ಪ್ರಯುಕ್ತ ಬ್ರಹ್ಮರಥೋತ್ಸವ ಪ್ರಯುಕ್ತ ದೇವಸ್ಥಾನದಲ್ಲಿ ಸ್ವಾಮಿಗೆ ಬೆಳಗಿನ ಜಾವ 2 ಗಂಟೆಯಿಂದಲೇ ವಿವಿಧ ಪೂಜಾ ಕಾರ್ಯಕ್ರಮ ಆರಂಭಿಸಲಾಯಿತು.

ಸುಬ್ರಹ್ಮಣ್ಯಸ್ವಾಮಿ ಹಾಗೂ ಲಕ್ಷ್ಮಿನರಸಿಂಹಸ್ವಾಮಿಗೆ ಹಾಲಿನಿಂದ ಅಭಿಷೇಕ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಶ್ರೀಗಂಧ ಅಭಿಷೇಕ, ಭಸ್ಮದಭಿಷೇಕದ ಬಳಿಕ ಹೂವಿನ ಅಲಂಕಾರ ಮಾಡಲಾಗಿತ್ತು.

- Advertisement - 

ಬೆಳಗ್ಗಿ ಜಾವ  4.30ಕ್ಕೆ ಮಹಾಮಂಗಳಾರತಿ ಮುಗಿಸಿ ನಂತರ ಬೆಳಗೆ 5 ರಿಂದ 6 ಗಂಟೆವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. 6 ಗಂಟೆಯಿಂದ ಭಕ್ತಾದಿಗಳಿಗಾಗಿ ಧರ್ಮದರ್ಶನ ಮತ್ತು ₹50ರ ವಿಶೇಷ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ನಂತರ  ರಥೋತ್ಸವಕ್ಕೆ ಭಕ್ತಾದಿಗಳು ಬಾಳೆಹಣ್ಣು ದವನ ಅರ್ಪಿಸುವ  ಮೂಲಕ ತಮ್ಮ ಹರಕೆ ತೀರಿಸಿ ಧನ್ಯತೆ ಮೆರೆದರು. ಬ್ರಹ್ಮ ರಥೋತ್ಸವಕ್ಕೆ ಬಂದ ಭಕ್ತರಿಗೆ ದೇವಾಲಯದ ಪ್ರಧಿಕಾರದಿಂದ ಉಚಿತ ಊಟದ ವ್ಯವಸ್ಥೆ ಮಾಡಲಾಗಿತ್ತು.

ಉಚಿತ ಬಸ್: ವ್ಯವಸ್ಥೆ
 ಬ್ರಹ್ಮರಥೋತ್ಸವ  ದಿನದಂದು ಬರುವ ಭಕ್ತಾದಿಗಳಿಗಾಗಿ ದೊಡ್ಡಬಳ್ಳಾಪುರದ ಸಮೀಪದ ಕಂಟನಕುಂಟೆಯಿಂದ 15 ಮತ್ತು ಮಾಕಳಿಯಿಂದ 10 ಉಚಿತ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. 4 ಮತ್ತು 2 ಚಕ್ರದ ವಾಹನಗಳಿಗೆ ಉಚಿತ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ‌.

ಜನವರಿ 1 ರಿಂದ 31 ರವರಗೆ ಕ್ಷೇತ್ರಕ್ಕೆ ಬರುವ ವಾಹನಗಳಿಗೆ ಸುಂಕ ವಿನಾಯಿತಿ ನೀಡಲಾಗಿದೆ.ಎಂದು ದೇವಾಲಯದ ಪ್ರಾಧಿಕಾರ ತಿಳಿಸಿದೆ.

ಸಾಮಾಜಿಕ ಭದ್ರತೆ:
ಬ್ರಹ್ಮ ರಥೋತ್ಸವಕ್ಕೆ ಬರುವ ಭಕ್ತರ ಭದ್ರತೆಗಾಗಿ   700 ಪೋಲಿಸ್ ಸಿಬ್ಬಂದಿ ಮತ್ತು 200 ಹೋಂ ಗಾರ್ಡ್‌ಗಳನ್ನು ನಿಯೋಜಿಸಲಾಗಿದೆ. ಸರಗಳ್ಳತನ, ಜೇಬುಗಳ್ಳತನ ಹಾಗೂ ಯಾವುದೇ ಅವಘಡ ನಡೆಯದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಕ್ಷೇತ್ರದ 1 ಕಿ.ಮೀ ಸುತ್ತಳತೆಯಲ್ಲಿ ಸುಮಾರು 80 ಸಿ.ಸಿ.ಟಿ.ವಿ ಕ್ಯಾಮರಾ ಅಳವಡಿಸಲಾಗಿದೆ.

ಕ್ಷೇತ್ರಕ್ಕೆ ಬಂದ ಭಕ್ತರಿಗೆ ತಾತ್ಕಾಲಿಕ ಶೌಚಗೃಹ, ಟ್ಯಾಂಕ‌ರ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆಯನ್ನು ದೇವಾಲಯ ವತಿಯಿಂದ ಮಾಡಲಾಗಿತ್ತು.

ತುರ್ತು ಸೇವೆಗಾಗಿ 3 ಅಂಬುಲೆನ್ಸ್ ಮತ್ತು ಆರೋಗ್ಯ ಇಲಾಖೆ ತಂಡವನ್ನು ಹಾಗೂ ಅಗ್ನಿ ಶಾಮಕ ವಾಹನದ ವ್ಯವಸ್ಥೆ ಮಾಡಲಾಗಿದೆ. ಡಿ. 23 ರಿಂದ 28 ರವರೆಗೆ ವಿಶೇಷ ದೀಪಾಲಂಕಾರದ ವ್ಯವಸ್ಥೆ ಮಾಡಲಾಗಿದೆ. ಹಿರಿಯ ನಾಗರಿಕರು, ಅಂಗವಿಕಲರು, ಗರ್ಭಿಣಿಯರಿಗೆ ನೇರ ದರ್ಶನ ವ್ಯವಸ್ಥೆ ಮಾಡಲಾಗಿತ್ತು.

ನಾಗಾರಾಧನೆ :
ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ ದಂದು ನಾಗರಕಲ್ಲಿಗೆ ಭಕ್ತಿಯಿಂದ ಹಣ್ಣ ಕಾಯಿ ಇಟ್ಟು ಪೂಜಿಸುವುದರಿಂದ ಕುಜದೋಷ ನಾಗದೋಷ ಕಾಳಸರ್ಪದೋಷವು ನಿವಾರಣೆಯಾಗುತ್ತೆ ಎಂಬ ನಂಬಿಕೆಯಿಂದ ತುಳುಷಷ್ಠೀಯ ದಿನ ನಾಗಾರಾಧನೆಯ ಕಲ್ಲಿ ಹಾವನ್ನು ದೇವರೆಂದು ಪೂಜಿಸುವುದಲ್ಲದೆ, ಪರಿಸರ ಮತ್ತು ಜೀವವೈವಿಧ್ಯತೆಯ ಬಗ್ಗೆ ಗೌರವವನ್ನು ತೋರಿಸುವ ಒಂದು ಸಂಸ್ಕೃತಿಯಾಗಿದೆ.

ಬ್ರಹ್ಮರಥೋತ್ಸವದಲ್ಲಿ ಶಾಸಕ ಧೀರಜ್ ಮುನಿರಾಜ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಾಶ್ರೀ, ತಹಶೀಲ್ದಾರ್ ಮಲ್ಲಪ್ಪ, ಘಾಟಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಒಟ್ಟಾರೆ ಈ ಬಾರಿಯ ಸುಬ್ರಮಣ್ಯ ಸ್ವಾಮಿ ಬ್ರಹ್ಮ ರಥೋತ್ಸವದ ಸಂದರ್ಭದಲ್ಲಿ ಭಕ್ತಾದಿಗಳಿಗೆ ಹಲವಾರು ಸೌಲಭ್ಯಗಳನ್ನು ಒದಗಿಸಲಾಗಿತ್ತು. ವಾಹನ ದಟ್ಟನೆ ಹಾಗೂ ಜನ ಸಂಖ್ಯೆಯ ನಿಯಂತ್ರಣಕ್ಕೆ ಅಲ್ಲಲ್ಲಿ ಪಾರ್ಕಿಂಗ್ ವ್ಯವಸ್ಥೆ ಉತ್ತಮವಾಗಿತ್ತು. ಪ್ರಾಧಿಕಾರದ ವತಿಯಿಂದ ಭಕ್ತಾದಿಗಳಿಗೆ ಉಚಿತ ದಾಸೋಹದ ವ್ಯವಸ್ಥೆ ಅಚ್ಚು ಕಟ್ಟಾಗಿತ್ತು. ಇವೆಲ್ಲಕ್ಕಿಂತ ಮುಖ್ಯವಾಗಿ ಜಾತ್ರಾ ಸಂದರ್ಭದಲ್ಲಿ ಪೊಲೀಸ್ ಸೂಕ್ತ ಭದ್ರತೆ ಒದಗಿಸಿತ್ತು. ಹೀಗೆ ಹತ್ತು ಹಲವು ಉತ್ತಮ ವ್ಯವಸ್ಥೆಗಳಿಂದಾಗಿ ಬ್ರಹ್ಮ ರಥೋತ್ಸವ ಭಕ್ತಾದಿಗಳ ಗಮನ ಸೆಳೆದಿತ್ತು.

 

Share This Article
error: Content is protected !!
";