ಘಾಟಿ ಸುಬ್ರಮಣ್ಯದೇವಸ್ಥಾನದ ಹುಂಡಿ ಎಣಿಕೆ: ಒಟ್ಟು 64.51ಲಕ್ಷ ಸಂಗ್ರಹ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತೂಬಗೆರೆ ಹೋಬಳಿ
  ನಾಗರಾಧನೆಗೆ  ಸುಪ್ರಸಿದ್ಧ ಪಡೆದಿರುವ  ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಗುರುವಾರ ಹುಂಡಿ ಎಣಿಕೆ ಕಾರ್ಯ ನಡೆಯಿತು.

ಘಾಟಿ ಸುಬ್ರಹ್ಮಣ್ಯ ದೇವಾಲದಲ್ಲಿ 27-3-2025 ಗುರುವಾರ ಹುಂಡಿಯಲ್ಲಿರುವ  ಕಾಣಿಕೆರೂಪದಲ್ಲಿ ಬಂದಿರುವ ಹಣ ಎಣಿಕೆ ಮಾಡಲಾಗಿದ್ದು, ರೂ.64,51,009 ಹಣ ಸಂಗ್ರಹವಾಗಿದೆ.

ಇದರೊಂದಿಗೆ 44100 ರೂ. ಮೌಲ್ಯದ 7 ಗ್ರಾಂ ಚಿನ್ನ, 77500 ರೂ. ಮೌಲ್ಯದ 1.550 ತೂಕದ ಬೆಳ್ಳಿಯನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ. ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.

ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯದರ್ಶಿ ಎಂ. ನಾರಾಯಣಸ್ವಾಮಿ, ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಜೆ.ಎನ್.ರಂಗಪ್ಪ, ಕೆ.ಎಸ್.ರವಿ, ಲಕ್ಷ್ಮಣ ನಾಯಕ್, ಆರ್‌. ವಿ .ಮಹೇಶ್ ಕುಮಾರ್, ಹೇಮಲತಾ ರಮೇಶ್, ಪ್ರಧಾನ ಅರ್ಚಕ ಆರ್. ಸುಬ್ರಹ್ಮಣ್ಯ‌, ದೇವಾಲಯದ ಸಿಬ್ಬಂದಿ, ಪೊಲೀಸ್ ಇಲಾಖೆ, ಕೆನರಾ ಬ್ಯಾಂಕ್ ಸಿಬ್ಬಂದಿ ಉಪಸ್ಥಿತರಿದ್ದರು.

 

 

 

 

 

Share This Article
error: Content is protected !!
";