ಜೈನ ಸಮಾಜದ ಅಭಿವೃದ್ಧಿಗೆ ಅನುದಾನ ಕೊಡಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಸಚಿವ ಡಿ.ಸುಧಾಕರ್ ಅವರು ಭೇಟಿ ಮಾಡಿ
, ಜೈನ್ ಸಮಾಜದ ಸಮಗ್ರ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಲು ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಚರ್ಚೆ ನಡೆಸಿದರು.

- Advertisement - 

ಶೈಕ್ಷಣಿಕ ಸೌಲಭ್ಯಗಳು, ಧಾರ್ಮಿಕ ಕೇಂದ್ರಗಳ ಸಂರಕ್ಷಣೆ ಹಾಗೂ ಸಾಂಸ್ಕೃತಿಕ ಬೆಳವಣಿಗೆಗೆ ಸರಕಾರದಿಂದ ಹೆಚ್ಚಿನ ನೆರವು ಲಭ್ಯವಾಗುವಂತೆ ಮನವಿಯನ್ನು ಇದೇ ಸಂದರ್ಭದಲ್ಲಿ ಸಚಿವ ಸುಧಾಕರ್ ಅವರು ಸಲ್ಲಿಸಿದರು.
ಮನವಿ ಸ್ವೀಕರಿಸಿ ಮಾತನಾಡಿ ಜಮೀರ್ ಅಹ್ಮದ್ ಖಾನ್, ಜೈನ್ ಸಮಾಜದ ಪ್ರಗತಿ ನಮ್ಮ ಗುರಿಯಾಗಿದೆ.
ಅಭಿವೃದ್ಧಿಯ ದಿಶೆಯಲ್ಲಿ ನಿರಂತರ ಹೆಜ್ಜೆಗಳನ್ನು ಇಡುತ್ತಿದ್ದೇವೆ ಎಂದು ಭರವಸೆ ನೀಡಿ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

- Advertisement - 

 

- Advertisement - 
Share This Article
error: Content is protected !!
";