ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರದಲ್ಲಿ ಪತ್ರಕರ್ತರ ಭವನ ನಿರ್ಮಾಣ ಮಾಡಲು ಖಾಲಿ ಜಾಗ ಮಂಜೂರು ಮಾಡಬೇಕು ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಪತ್ರಕರ್ತರ ಮನವಿಗೆ ಸ್ಪಂದಿಸಿದ ಸಚಿವರು ಶೀಘ್ರವೇ ತಾಲೂಕಿನಲ್ಲಿ ಪತ್ರಕರ್ತರ ಭವನ ನಿರ್ಮಾಣ ಮಾಡಲು ಖಾಲಿ ಜಾಗ ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಂಎಲ್. ಗಿರಿಧರ್, ಪ್ರಧಾನ ಕಾರ್ಯದರ್ಶಿ ಚಿದಾನಂದ್ ಎಂ ಮಸ್ಕಲ್, ಹಿರಿಯ ಪತ್ರಕರ್ತರಾದ ರಮೇಶ್ ಬಿದರಿಕೆರೆ, ಪ್ರಕಾಶ್ ಬಬ್ಬೂರು, ತಾಲೂಕು ಉಪಾಧ್ಯಕ್ಷ ಬಸವೇಗೌಡ, ಹರ್ತಿಕೋಟೆ ರಾಜಣ್ಣ, ಜಿಲ್ಲಾ ನಿರ್ದೇಶಕರು ಪ್ರಸನ್ನ, ತಾಲೂಕು ಕಾರ್ಯದರ್ಶಿ ಹನುಮಂತರಾಯ, ಪ್ರವೀಣ್ ಇದ್ದರು.

