ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಯುವಜನರು ಎಲ್ಲ ಬಗೆಯ ದುಶ್ಚಟಗಳನ್ನು ತೊರೆದು, ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜ್ಪೀರ್ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಹಾಗೂ ಸರ್ಕಾರಿ ವಿಜ್ಞಾನ ಕಾಲೇಜು ವತಿಯಿಂದ ಶುಕ್ರವಾರ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರಸ್ತುತ ದಿನಮಾನಗಳಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದಾರೆ. ಇಂತಹ ದುಶ್ಚಟಗಳಿಂದ ಹೊರಬಂದು ಓದು, ಕ್ರೀಡೆ, ಕಲೆ, ಸಾಂಸ್ಕøತಿಕ ಹೀಗೆ ಮುಂತಾದ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಬೇಕು. ಸಿಗುವ ಅವಕಾಶಗಳನ್ನು ಬಳಸಿಕೊಂಡು ಭವಿಷ್ಯದಲ್ಲಿ ಉಜ್ವಲವಾಗಿ ಬೆಳೆಯಬೇಕು, ನಾಡಿಗೆ ಕೀರ್ತಿ ತರುವ ಕಾರ್ಯವನ್ನು ಯುವಜನರು ಮಾಡಬೇಕು ಎಂದರು.
ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಮಾತನಾಡಿ, ಪ್ರಸ್ತುತ ಶಿಕ್ಷಣದ ಜೊತೆಗೆ ವಿವಿಧ ರೀತಿಯ ಕೌಶಲ್ಯಗಳು ಅಗತ್ಯ. ಕಥೆ, ಕವನ ಹಾಗೂ ಭಾಷಣ ಸ್ಪರ್ಧೆ, ಕವನ ಬರಹ, ಭಾಷಣ, ಚಿತ್ರಕಲೆ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಕಲೆ, ಕೌಶಲ್ಯಗಳನ್ನು ರೂಢಿಸಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿಸುತ್ತದೆ. ಹಾಗಾಗಿ ಯುವಜನತೆ ತಮಗೆ ಇಷ್ಟವಾದ ಕಲೆ, ಕೌಶಲ್ಯಗಳನ್ನು ಮತ್ತಷ್ಟು ವೃದ್ಧಿಸಿಕೊಂಡು ಸರಿಯಾದ ವೇದಿಕೆ ಸಿಕ್ಕಾಗ ಸದ್ಬಳಕೆ ಮಾಡಿಕೊಳ್ಳುವ ಮೂಲಕ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು ಎಂದು ಸಲಹೆ ನೀಡಿದರು.
ನೆಹರು ಯುವ ಕೇಂದ್ರದ ಸಮನ್ವಯಾಧಿಕಾರಿ ಸುಹಾಸ್ ಮಾತನಾಡಿ, ದೇಶಕಂಡ ಸಂತಶ್ರೇಷ್ಠ ಸ್ವಾಮಿ ವಿವೇಕಾನಂದ ಅವರ ನೆನಪಿನಾರ್ಥವಾಗಿ ಪ್ರತಿ ವರ್ಷ ಜ.12 ರಿಂದ ಯುವಜನೋತ್ಸವ ಕಾರ್ಯಕ್ರಮ ಆಚರಿಸಲಾಗುತ್ತದೆ.
ಈ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಜಾನಪದ ಗೀತೆ, ನೃತ್ಯ, ಹಾಗೂ ಪಂಚಪ್ರಾಣ ಎಂಬ ವಿಷಯವನ್ನಾಧರಿಸಿ ಕಥೆ, ಕವನ ಹಾಗೂ ಭಾಷಣ ಸ್ಪರ್ಧೆ, ಕವನ ಬರಹ, ಭಾಷಣ, ಚಿತ್ರಕಲೆ, ವಿಜ್ಞಾನ ಮೇಳ, ಮೊಬೈಲ್ ಫೋಟೊಗ್ರಫಿ, ಉತ್ತಮ ಕರಕುಶಲ ವಸ್ತು ಪ್ರದರ್ಶನ, ಸಿದ್ದಉಡುಪು ಹಾಗೂ ಆಹಾರ ಸಂಸ್ಕರಣೆ ಸೇರಿದಂತೆ ಒಟ್ಟು 11 ಸ್ಫರ್ಧೆಗಳನ್ನು ಆಯೋಜಿಸಲಾಗಿದೆ. ಇಂತಹ ಕಾರ್ಯಕ್ರಮಗಳು ಯುವಜನತೆಯಲ್ಲಿನ ಕಲೆ, ಸಾಂಸ್ಕøತಿಕ ಕೌಶಲ್ಯಗಳನ್ನು ಹೊರಹಾಕಲು ಸೂಕ್ತ ವೇದಿಕೆಯಾಗಿವೆ. ಹಾಗಾಗಿ ಶಿಕ್ಷಣದಿಂದ ಅಷ್ಟೇ ಅಲ್ಲದೇ, ತಮಗೆ ಆಸಕ್ತಿ ಇರುವ ಕಲೆಗಳ ಮೂಲಕ ಜ್ಞಾನ, ವೃದ್ಧಿಸಿಕೊಂಡು ವೃತ್ತಿ ಬದುಕಾಗಿ ಸ್ವೀಕರಿಸಬಹುದು ಎಂದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ ಮಾತನಾಡಿ, ಯುವಕರು ಪ್ರಸ್ತುತ ದಿನಮಾನಗಳಲ್ಲಿ ಕಲೆ, ಕ್ರೀಡೆ, ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಸಕ್ತಿ ತೋರುತ್ತಿಲ್ಲ. ಏಕೆಂದರೆ ಪೋಷಕರು ಕೇವಲ ಶೈಕ್ಷಣಿಕವಾಗಿ ಅಷ್ಟೇ ಒತ್ತು ನೀಡುತ್ತಿರುವುದು ಇದಕ್ಕೆ ಮುಖ್ಯ ಕಾರಣ.ಪ್ರತಿಯೊಬ್ಬರಲ್ಲಿಯೂ ಪ್ರತಿಭೆ, ಕಲೆ ಕೌಶಲ್ಯಗಳಿರುತ್ತವೆ. ಶಾಲಾ–ಕಾಲೇಜುಗಳಲ್ಲಿ ಅವುಗಳನ್ನು ಗುರುತಿಸಿ ಪೋಷಿಸಿ, ಪ್ರೋತ್ಸಾಹಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ಪುರಸ್ಕøತರಾದ ಡಿ.ಶ್ರೀಕುಮಾರ್, ಪ್ರತಾಪ್ ಜೋಗಿ, ಸಿ.ಎನ್.ವೆಂಕಟೇಶ್, ಲಕ್ಷ್ಮೀ, ಹಿರಿಯೂರು ಚಿತ್ತಪ್ಪ ಅವರನ್ನು ಸನ್ಮಾನಿಸಲಾಯಿತು. ಸರ್ಕಾರಿ ವಿಜ್ಞಾನ ಕಾಲೇಜು ಉಪನ್ಯಾಸಕ ನಾಗರಾಜ್ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಅಂತ್ಯೋದಯ ಕಲ್ಚರಲ್ ಪೌಂಡೇಷನ್ ಅಧ್ಯಕ್ಷ ಡಿ.ಓ.ಮುರಾರ್ಜಿ ಸರ್ಕಾರಿ ವಿಜ್ಞಾನ ಕಾಲೇಜಿನ ಬೋದಕ ಮತ್ತು ಬೋದಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.