ನ್ಯಾಯಾಲಯದಲ್ಲಿ ಸುಳ್ಳು ಆರೋಪಗಳಿಗೆ ತಕ್ಕ ಉತ್ತರ ನೀಡುವೆ

News Desk

ಚಂದ್ರವಳ್ಳಿ ನ್ಯೂಸ್, ಮೈಸೂರು:
ಮುಡಾದಿಂದ ಹಂಚಿಕೆಯಾದ 14 ನಿವೇಶನಗಳು ಕಾನೂನುಬದ್ಧವಾಗಿತ್ತೇ
, ಅವುಗಳನ್ನು ವಾಪಸ್ಸು ನೀಡಲಾಯಿತೇಕೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ನಿವೇಶನ ಹಂಚಿಕೆ ಕಾನೂನೂ ಬದ್ಧವಾಗಿಯೇ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement - 

ಮೈಸೂರಿನಲ್ಲಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿ ಬಿಜೆಪಿ ಜೆಡಿಎಸ್ ನವರು ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಈ ಸಂಬಂಧ ಲೋಕಾಯುಕ್ತ ವಿಚಾರಣೆಯಲ್ಲಿ ಉತ್ತರ ನೀಡಿದ್ದು, ತನಿಖೆಯನ್ನು ಕಾನೂನುರೀತ್ಯ ಮುಂದುವರೆಸಲಿದ್ದಾರೆ ಎಂದು ಸಿಎಂ ತಿಳಿಸಿದರು.

- Advertisement - 

ನನ್ನ ಮೇಲೆ ಬಂದ ಸುಳ್ಳು ಆರೋಪಗಳ ಮಾಡಲಾಗಿದ್ದರಿಂದ ನನ್ನ ಪತ್ನಿ ನಿವೇಶನಗಳನ್ನು ವಾಪಸ್ಸು ನೀಡಿದರೆ ಹೊರತು, ತಪ್ಪು ಮಾಡಿದ್ದಕ್ಕಾಗಿ ನಿವೇಶನಗಳನ್ನು ವಾಪಸ್ಸು ನೀಡಲಾಗಿಲ್ಲ. 

ಈ ಮುಡಾ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆ ನನ್ನ ಬಳಿಯಿಲ್ಲ ಹಾಗೂ ನನ್ನಿಂದ ಯಾವುದೇ ದಾಖಲೆ ಕೇಳಲಾಗಿಲ್ಲ.

- Advertisement - 

ನ್ಯಾಯಾಲಯದಲ್ಲಿ ತೀರ್ಮಾನವಾಗುವವರೆಗೆ ನನ್ನ ರಾಜಕೀಯ ಜೀವನಕ್ಕೆ ಯಾವುದೇ ಕಪ್ಪು ಮಸಿ ಇಲ್ಲ.  ನನ್ನ ಮೇಲೆ ಮಾಡಲಾಗಿರುವ ಸುಳ್ಳು ಆರೋಪಗಳಿಗೆ ನ್ಯಾಯಾಲಯದಲ್ಲಿ ತಕ್ಕ ಉತ್ತರವನ್ನು ನೀಡಲಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

 

Share This Article
error: Content is protected !!
";