ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಾಗತಿಕ ಹೂಡಿಕೆದಾರರ ವಿಶ್ವಾಸದ ನೆಲೆ – ನಮ್ಮ ಕರ್ನಾಟಕ. ನಮ್ಮ ಸರ್ಕಾರದ ಹೊಸ-ಹೊಸ ಚಿಂತನೆಗಳು ಮತ್ತು ವಿನೂತನ ಯೋಜನೆಗಳ ಪರಿಣಾಮ ಕರ್ನಾಟಕ ಕೈಗಾರಿಕಾಭಿವೃದ್ಧಿಯ ತವರಾಗಿದ್ದು, ಬಲಿಷ್ಠ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿದೆ. ವಿಶ್ವದ ಟಾಪ್ 10 ಟೆಕ್ ಹಬ್‌ಗಳಲ್ಲಿ 6ನೇ ಸ್ಥಾನ ಪಡೆದಿರುವ ಬೆಂಗಳೂರು ತಂತ್ರಜ್ಞಾನ ಕ್ಷೇತ್ರದಲ್ಲಿ ತನ್ನ ಹಿರಿಮೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಹೇಳಿದರು.
2025–26 ಹಣಕಾಸು ವರ್ಷದ ಏಪ್ರಿಲ್–ಜೂನ್ ತ್ರೈಮಾಸಿಕದಲ್ಲಿ ಕರ್ನಾಟಕಕ್ಕೆ $5.61 ಬಿಲಿಯನ್ ವಿದೇಶಿ ಹೂಡಿಕೆ ಹರಿದು ಬಂದಿದೆ. ಮಹಾರಾಷ್ಟ್ರವನ್ನು ಹಿಂದಿಕ್ಕಿ ಭಾರತದಲ್ಲಿಯೇ ಮೊದಲ ಸ್ಥಾನಕ್ಕೆ ಕರ್ನಾಟಕ ಏರಿದ್ದು ನಮ್ಮಲ್ಲಿನ ಹೂಡಿಕೆಸ್ನೇಹಿ ಪರಿಸರದ ಮೇಲೆ ಹೂಡಿಕೆದಾರರು ಇಟ್ಟಿರುವ ನಂಬಿಕೆಗೆ ಸಾಕ್ಷಿಯಾಗಿದೆ.
ಆರ್ಥಿಕ ಬೆಳವಣಿಗೆಯ ಹಾದಿಯಲ್ಲಿ ಕರ್ನಾಟಕ ಉಳಿದ ರಾಜ್ಯಗಳಿಗಿಂತ ಮುಂದಿದ್ದು, ದೇಶದ ಜಿಡಿಪಿಗಿಂತ ಹೆಚ್ಚಿನ ಬೆಳವಣಿಗೆ ದರ ಸಾಧಿಸಿದೆ. ತಲಾ ಆದಾಯ ಏರಿಕೆಯಲ್ಲಿ ದೇಶದಲ್ಲೇ ಮೊದಲ ಸ್ಥಾನ ಪಡೆದಿರುವ ಕರ್ನಾಟಕ, ಜೀವನಮಟ್ಟ ಸುಧಾರಣೆಯೊಂದಿಗೆ $1 ಟ್ರಿಲಿಯನ್ ಆರ್ಥಿಕತೆಯತ್ತ ದೃಢವಾಗಿ ಹೆಜ್ಜೆ ಹಾಕುತ್ತಿದೆ ಎಂದು ಸಚಿವ ಪಾಟೀಲ್ ಹೇಳಿದರು.

