ಕರ್ನಾಟಕದ ದ್ರಾಕ್ಷಿಗೆ ಜಾಗತಿಕ ಹಾದಿ: ಎಂ.ಬಿ ಪಾಟೀಲ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘದ ವತಿಯಿಂದ ತಿಕೋಟಾದ ಕನಕದಾಸ ಭವನದಲ್ಲಿ ಹಮ್ಮಿಕೊಂಡಿದ್ದ
ರಾಷ್ಟ್ರಮಟ್ಟದ ದ್ರಾಕ್ಷಿ ಬೆಳೆಯ ಸಂಕಿರಣ-2025ಅನ್ನು ತಿಕೋಟಾದ ವಿರಕ್ತಮಠದ ಶ್ರೀ ಚೆನ್ನ ಮಲ್ಲಿಕಾರ್ಜುನ ಸ್ವಾಮೀಜಿಯವರು ದಿವ್ಯ ಸಾನಿಧ್ಯದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಅವರು ಉದ್ಘಾಟಿಸಿದರು.  

3 ದಿನಗಳ ಕಾಲ ವಿಚಾರ ಸಂಕಿರಣ ನಡೆಯಲಿದ್ದು, ದ್ರಾಕ್ಷಿ ಬೆಳೆಗಾರರ ಸಮಸ್ಯೆಗಳು ಹಾಗೂ ಪರಿಹಾರ ಕುರಿತು ವಿಸ್ತೃತ ಚರ್ಚೆ ನಡೆಯಲಿದೆ ಎಂದು ಸಚಿವರು ತಿಳಿಸಿದರು.

- Advertisement - 

ದ್ರಾಕ್ಷಿ ಉತ್ಪಾದನೆಯಲ್ಲಿ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಅದರಲ್ಲಿ ಉತ್ತರ ಕರ್ನಾಟಕದ ಕೊಡುಗೆ ಪ್ರಮುಖ! ವಿಜಯಪುರ ಜಿಲ್ಲೆಯ, ವಿಶೇಷವಾಗಿ ತಿಕೋಟಾ ತಾಲ್ಲೂಕಿನ ದ್ರಾಕ್ಷಿಗೆ ಭಾರತದಲ್ಲಷ್ಟೇ ಅಲ್ಲ, ಜಗತ್ತಿನ ಅನೇಕ ದೇಶಗಳಲ್ಲಿ ಬೇಡಿಕೆಯಿದೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ವಿಜ್ಞಾನಾಧಾರಿತ ಕ್ರಮಗಳುಬೆಳೆಗಾರರ ಶ್ರಮ, ನಾವೀನ್ಯತೆ ಮತ್ತು ಸಂಘಟಿತ ಪ್ರಯತ್ನಗಳು ದ್ರಾಕ್ಷಿ ಕ್ಷೇತ್ರವನ್ನು ಇನ್ನಷ್ಟು ಸಿರಿವಂತಗೊಳಿಸಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದರು.

- Advertisement - 

ಸಚಿವ ಶಿವಾನಂದ ಪಾಟೀಲ್, ಸಂಸದರಾದ ರಮೇಶ್ ಜಿಗಜಿಣಗಿ, ಶಾಸಕ ಲಕ್ಷ್ಮಣ್ ಸವದಿ ಸೇರಿದಂತೆ ದೇಶದ ನಾನಾ ಭಾಗಗಳಿಂದ ಆಗಮಿಸಿದ್ದ ಬೆಳೆಗಾರರು, ಪ್ರಗತಿಪರ ರೈತರು ವಿಚಾರ ಸಂಕಿರಣದಲ್ಲಿ ಉಪಸ್ಥಿತರಿದ್ದರು.

 

 

 

 

 

Share This Article
error: Content is protected !!
";