ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ದೇವರ ದಯೆಯಿಂದ ಕಳೆದ ಎರಡು ದಿನಗಳಿಂದ ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗಿದೆ. ರೈತರು ತಮ್ಮ ಕೃಷಿ ಚಟುವಟಿಕೆಗಳಿಗೆ ಚಾಲನೆ ನೀಡಿದ್ಧಾರೆ. ಕಳೆದ ಹಲವಾರು ವರ್ಷಗಳಿಂದ ನಾವೆಲ್ಲರೂ ದೇವರಮೇಲೆ ಅಪಾರಭಕ್ತಿ, ಶ್ರದ್ದೆಯಿಟ್ಟು ಪೂಜಿಸುವುದರಿಂದ ವರುಣನ ಕೃಪೆಯಾಗಿದೆ. ಮಾರಮ್ಮದೇವಿ ಈ ಭಾಗದ ಎಲ್ಲಾ ಜನರಿಗೆ ಸುಖ, ಶಾಂತಿ, ನೆಮ್ಮದಿ ನೀಡಲಿ ಎಂದು ಪ್ರಾರ್ಥಿಸಿರುವುದಾಗಿ ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.
ಅವರು, ಗುರುವಾರ ಗೊರ್ಲಕಟ್ಟೆ ಗ್ರಾಮದ ಶ್ರೀಮಾರಮ್ಮದೇವಿ ದೇವಸ್ಥಾನದ ಕಳಸಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಇದೇ ಸಂದರ್ಭದಲ್ಲಿ ಮಾರಮ್ಮದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕರು, ಗ್ರಾಮೀಣ ಭಾಗದ ಅಭಿವೃದ್ದಿ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಎಲ್ಲರ ಸಹಕಾರ ಮುಖ್ಯವೆಂದರು.
ನನ್ನಿವಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಶಾಸಕ ಅನುದಾನದಲ್ಲಿ ಕಟ್ಟಡ ನಿರ್ಮಾಣ, ಶಾಲೆಗಳ ಕಾಂಫೌಂಡ್ ದುರಸ್ಥಿ ಸೇರಿದಂತೆ ಹಲವಾರು ಯೋಜನೆಗಳಿಗೆ ಅನುದಾನವನ್ನು ನೀಡಲಾಗಿದೆ.
ಗ್ರಾಮಪಂಚಾಯಿತಿ ಅಭಿವೃದ್ದಿಯ ಬಗ್ಗೆ ಎಲ್ಲರೂ ವಿಶೇಷ ಆಸಕ್ತಿಹೊಂದಬೇಕು. ಸರ್ಕಾರದಿಂದ ಯಾವುದೇ ನೆರವನ್ನು ಮಂಜೂರು ಮಾಡಿಸಿ ಪಂಚಾಯಿತಿಗೆ ನೀಡಿ ಅಭಿವೃದ್ದಿ ಕಾಮಗಾರಿಗಳಿಗೆ ಎಂದಿನಂತೆ ಸಹಕರಿಸುವ ಭರವಸೆ ನೀಡಿದರು.
ಗ್ರಾಪಂ ಅಧ್ಯಕ್ಷೆ ಶಿವಮ್ಮ, ಉಪಾಧ್ಯಕ್ಷೆ ಬೀಬಿಜಾನ್, ನಗರಸಭೆ ಸ್ಥಾಯಿಸಮಿತಿ ಅಧ್ಯಕ್ಷ ಟಿ.ಮಲ್ಲಿಕಾರ್ಜುನ್, ಸದಸ್ಯರಾದ ಕವಿತಾ, ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆತಿಪ್ಪೇಸ್ವಾಮಿ, ಗ್ರಾಮದ ಮುಖಂಡರಾದ ರಾಜಣ್ಣ, ಉಮೇಶ್, ಪ್ರಕಾಶ್, ಕಾಟಯ್ಯ, ಭೀಮಚಂದ್ರ ಮುಂತಾದವರು ಪಾಲ್ಗೊಂಡಿದ್ದರು.

