ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ನಡೆದ 50ನೇ ಗೋಲ್ಡನ್ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್ಶಿಪ್ –2025ನಲ್ಲಿ ದೊಡ್ಡಬಳ್ಳಾಪುರದ ನಿಸರ್ಗ ಯೋಗ ಕೇಂದ್ರದ ಹಾಗೂ
ಕರ್ನಾಟಕ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ 18 ರಿಂದ 21ವರ್ಷದ ಬಾಲಕರ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದು ದೊಡ್ಡಬಳ್ಳಾಪುರಕ್ಕೆ ಅಲ್ಲದೆ ಕರ್ನಾಟಕ ಕ್ಕೆ ಕೀರ್ತಿಯನ್ನು ತಂದಿದ್ದಾರೆ.
ವರಪ್ರಸಾದ್ ಅವರ ಸಾಧನೆಯನ್ನು ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಎ.ನಟರಾಜ್ (ಯೋಗ), ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಮೆಚೂರ್ ಯೋಗಾ ಅಸೋಸಿಯೇಷನ್ ಅಧ್ಯಕ್ಷ ಎಂ.ಜಿ.ಅಮರನಾಥ್, ನಿಸರ್ಗ ಯೋಗ ಕೇಂದ್ರದ ಖಜಾಂಚಿ ಕೆ.ಆರ್. ಶ್ಯಾಮ ಸುಂದರ್, ಯೋಗ ಕೇಂದ್ರದ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ಅಭಿನಂದಿಸಿದ್ದಾರೆ.

