ಸುಮಂಗಲಿ ಸೇವಾಶ್ರಮದ ಸುವರ್ಣ ಸಂಭ್ರಮೋತ್ಸವ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿಂದು ಜರುಗಿದ ಸುಮಂಗಲಿ ಸೇವಾಶ್ರಮದ ಸುವರ್ಣ ಸಂಭ್ರಮೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು, ಸುಮಂಗಲಿ ಸೇವಾಶ್ರಮದ ಅಪೂರ್ವವಾದ ಸೇವಾ ಕಾರ್ಯಗಳನ್ನು ಸ್ಮರಿಸಲಾಯಿತು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು.

ಸುತ್ತೂರು ಸಂಸ್ಥಾನ ಮಠದ ಶ್ರೀ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ, ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ, ಭಾಲ್ಕಿ ಮಠದ ಶ್ರೀ ಡಾ. ಬಸವಲಿಂಗ ಪಟ್ಟದೇವರು ಮಹಾಸ್ವಾಮೀಜಿ ಹಾಗೂ ಬೇಲಿ ಮಠದ ಶ್ರೀ ಶಿವರುದ್ರ ಮಹಾಸ್ವಾಮೀಜಿಗಳವರು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದರು.

- Advertisement - 

ಈ ಸಮಾರಂಭದಲ್ಲಿ ರಾಜ್ಯಸಭಾ ಸದಸ್ಯ ಕೆ. ನಾರಾಯಣ, ನಾಡೋಜ ಡಾ.ಗೊ. ರು ಚನ್ನಬಸಪ್ಪ, ಸುಮಂಗಲಿ ಸೇವಾಶ್ರಮದ ಅಧ್ಯಕ್ಷೆ ಡಾ.ಎಸ್.ಜಿ ಸುಶೀಲಮ್ಮ, ಮಾಜಿ ಸಚಿವೆ ಡಾ. ಲೀಲಾದೇವಿ ಆರ್.‌ಪ್ರಸಾದ್‌, ಡಾ. ಸಿ ಸೋಮಶೇಖರ್‌ಅವರು ಸೇರಿದಂತೆ ಪ್ರಮುಖರು ಹಾಗೂ ಗಣ್ಯಮಾನ್ಯರು ಉಪಸ್ಥಿತರಿದ್ದರು.

 

- Advertisement - 

 

 

 

 

Share This Article
error: Content is protected !!
";