ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ:
ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂವರು ಮಹಿಳೆಯರು ಕಾಣೆಯಾದ ಕುರಿತು ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಹೊಳಲ್ಕೆರೆ ತಾಲ್ಲೂಕಿನ ತೇಕಲವಟ್ಟಿ ಗೊಲ್ಲರಹಟ್ಟಿ ಗ್ರಾಮದ ರೇಣುಕಮ್ಮ ಗಂಡ ಕರಿಯಪ್ಪ (ಸು.21 ವರ್ಷ) ಎಂಬ ಯುವತಿ ಕಾಣೆಯಾದ ಕುರಿತು ಸೆ.19ರಂದು ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ರೇಣುಕಮ್ಮ ಸು.5 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಭಾಷೆ ಮಾತನಾಡುವರು. ಮನೆಯಿಂದ ಹೋಗುವಾಗ ಬಿಳಿ ಮಿಶ್ರಿತ ಬೂದು ಬಣ್ಣದ ನೈಟಿ ಧರಿಸಿರುತ್ತಾರೆ.
ಹೊಳಲ್ಕೆರೆ ತಾಲ್ಲೂಕಿನ ನಂದನ ಹೊಸೂರು ಗ್ರಾಮದ ನಿವಾಸಿ ವಿಜಯಮ್ಮ ಗಂಡ ಚಿತ್ರಶೇಖರ (ಸು.35ವರ್ಷ) ಸೆ.19ರಂದು ಕಾಣೆಯಾದ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ವಿಜಯಮ್ಮ 5 ಅಡಿ ಎತ್ತರ, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಭಾಷೆ ಮಾತನಾಡುವರು. ಬಲಗಣ್ಣು ಚಿಕ್ಕದಾಗಿದ್ದು, ಕಣ್ಣಿನಲ್ಲಿ ಬಿಳಿ ಹೂ ಇರುತ್ತದೆ. ಮನೆಯಿಂದ ಹೋಗುವಾಗ ಕಪ್ಪು ಬಣ್ಣದ ನೈಟಿ ಧರಿಸಿರುತ್ತಾಳೆ.
ಹೊಳಲ್ಕೆರೆ ತಾಲ್ಲೂಕಿನ ತೊಡರನಾಳ್ ಗ್ರಾಮದ ದೀಪಾ ತಂದೆ ಪ್ರಕಾಶ್ (20ವರ್ಷ) ಯುವತಿ ಸೆ.22ರಂದು ಕಾಣೆಯಾದ ಕುರಿತು ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಕಾಣೆಯಾದ ದೀಪಾ 5.2 ಅಡಿ ಎತ್ತರ, ಕೋಲು ಮುಖ, ಕಪ್ಪುಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಮತ್ತು ಇಂಗ್ಲೀಷ್ ಮಾತನಾಡುವರು. ಮನೆಯಿಂದ ಹೋಗುವಾಗ ಹಸಿರು ಬಣ್ಣದ ಚೂಡಿದಾರದ ಟಾಪ್. ಅರಿಶಿಣ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.
ಕಾಣೆಯಾದವರ ಕುರಿತು ಮಾಹಿತಿ ಕಂಡುಬಂದಲ್ಲಿ ಹೊಳಲ್ಕೆರೆ ತಾಲ್ಲೂಕು ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಸಹಾಯಕ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.