ಗುಡ್ ನ್ಯೂಸ್, ಪವರ್ ಲೂಮ್ ವಿದ್ಯುತ್ ಸಬ್ಸಿಡಿ ಮಿತಿ ರದ್ದು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರ ವಿದ್ಯುತ್ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳ ವಿದ್ಯುತ್ ಸಬ್ಸಿಡಿ ಮಿತಿ ರದ್ದುಪಡಿಸಿದೆ. ಇದರಿಂದ ಪ್ರತಿ ನೇಕಾರರಿಗೆ ವಾರ್ಷೀಕ ಕನಿಷ್ಟ ರೂ 40,000 ಉಳಿತಾಯವಾಗಲಿದೆ ಎಂದು ಸಚಿವರು ತಿಳಿಸಿದರು.

10.1 ಹೆಚ್.ಪಿ  ಯಿಂದ 20 ಹೆಚ್.ಪಿವರೆಗಿನ ವಿದ್ಯುತ್  ಮಗ್ಗ ಮತ್ತು ಮಗ್ಗಪೂರ್ವ ಘಟಕಗಳು ಬಳಕೆ ಮಾಡುವ ಪೂರ್ಣ ವಿದ್ಯುತ್‍ಗೆ ಸಬ್ಸಿಡಿ ನೀಡಲಿದ್ದು, ನೇಕಾರರು ಪ್ರತಿ ಯೂನಿಟ್‍ಗೆ ರೂ 1.25 ಮಾತ್ರ ಪಾವತಿ ಮಾಡಬೇಕು.  ಸರ್ಕಾರದ ಈ ಕ್ರಮದಿಂದ 4000 ಘಟಕಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಇದುವರೆಗೆ ಮಾಸಿಕ 500 ಯೂನಿಟ್‍ಗೆ ಮಾತ್ರ ಸಬ್ಸಿಡಿ ನೀಡಲಾಗುತ್ತಿತ್ತು. ಹೆಚ್ಚುವರಿ ಬಳಕೆಯ ವಿದ್ಯುತ್‍ಗೆ ನೇಕಾರರು ವಿದ್ಯುತ್ ಕಂಪನಿಗಳು ನಿಗದಿಪಡಿಸಿರುವ ದರದಲ್ಲಿ ವಿದ್ಯುತ್ ಶುಲ್ಕ ಪಾವತಿಸಬೇಕಿತ್ತು. ಸರ್ಕಾರ ಸಬ್ಸಿಡಿ ಮಿತಿ ರದ್ದುಪಡಿಸಿರುವುದರಿಂದ ಮಾಸಿಕ ಎಷ್ಟೇ ಯೂನಿಟ್ ವಿದ್ಯುತ್ ಬಳಕೆ ಮಾಡಿದರೂ ರೂ 1.25 ದರ ವಿಧಿಸಲಾಗುವುದು ಎಂದು ತಿಳಿಸಿದರು.  

ನಮ್ಮ ಸರ್ಕಾರ ಅಧಿಕಾರ ವಹಿಸಿಕೊಂಡ ಕೂಡಲೇ ಚುನಾವಣೆ ಸಮಯದಲ್ಲಿ ಕೊಟ್ಟ ಮಾತಿನಂತೆ 10 ಹೆಚ್.ಪಿ ವರೆಗಿನ ಎಲ್ಲ ವಿದ್ಯುತ್ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಿಗೆ ಶೂನ್ಯದರದಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ.

10.1 ರಿಂದ 20 ಹೆಚ್.ಪಿ ವರೆಗೆ ಸಬ್ಸಿಡಿ ದರದಲ್ಲಿ 500 ಯೂನಿಟ್  ಪೂರೈಕೆ ಮಾಡಲಾಗುತ್ತಿತ್ತು. ನೇಕಾರರು 500 ಯೂನಿಟ್ ಮಿತಿ ರದ್ದುಪಡಿಸಿ ಪೂರ್ಣ ಪ್ರಮಾಣದಲ್ಲಿ ಸಬ್ಸಿಡಿ ದರದಲ್ಲಿ ವಿದ್ಯುತ್ ಪೂರೈಕೆ ಮಾಡಬೇಕು ಎಂಬ ಬೇಡಿಕೆ ಇಟ್ಟಿದ್ದರು. ಸರ್ಕಾರ ನೇಕಾರರ ಬೇಡಿಕೆಗೆ ಸ್ಪಂದಿಸಿ 500 ಯೂನಿಟ್ ಮಿತಿ ರದ್ದುಪಡಿಸಿದೆ. ಈ ಕ್ರಮದಿಂದ ಸರ್ಕಾರಕ್ಕೆ ವಾರ್ಷೀಕ 17 ಕೋಟಿ ರೂ. ಹೊರೆಯಾಗಲಿದೆ ಎಂದು ತಿಳಿಸಿದರು.

 

 

 

- Advertisement -  - Advertisement - 
Share This Article
error: Content is protected !!
";