ಚಂದ್ರವಳ್ಳಿ ನ್ಯೂಸ್, ಕೂಡ್ಲಿಗಿ :
ತಾಲೂಕು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಒಂದು ವಾರದಿಂದ ಸತತ ಸುರಿದ ಉತ್ತಮ ಮಳೆಯಿಂದಾಗಿ ತಾಲೂಕಿನ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ತಾಲೂಕಿನಾದ್ಯಂತ ಹಲವು ಗ್ರಾಮಗಳಲ್ಲಿ ಶೇಂಗಾ, ಸೂರ್ಯಕಾಂತಿ, ಎಳ್ಳು, ಮತ್ತಿತರ ಬೆಳೆಗಳ ಬಿತ್ತನೆಗೆ ರೈತರು ಮುಂದಾಗಿದ್ದು ಕೃಷಿ ಬಿತ್ತನೆ ಕಾರ್ಯ ಚುರುಕಾಗಿದೆ. ಸತತವಾಗಿ ಸುರಿದ ಮಳೆಗೆ ಈ ಹಿಂದೆ ಬಿತ್ತನೆ ಮಾಡಿರುವ ಮೆಕ್ಕೆಜೋಳ, ಸಜ್ಜೆ ಮತ್ತು ಇನ್ನಿತರೆ ಬೆಳೆಗಳಿಗೆ ಕಳೆ ಬಂದಿದೆ ಮತ್ತು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ರೈತರು ಹೊಲದಲ್ಲಿ ಬೆಳೆಯನ್ನು ಉಳಿಸಿಕೊಳ್ಳಲು ಬೋರ್ ವೆಲ್ ಯಿಂದ ಮೂಲಕ ನೀರು ಒದಗಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿತ್ತು.
ಹಲವೆಡೆ ಬೋರ್ವೆಲ್ಗಳು ಬತ್ತಿ ಹೋಗಿದ್ದವು ಈಗ ಸುರಿದ ಮಳೆಯಿಂದ ಕೆಲ ಹೊಲಗಳ ಬೋರ್ವೆಲ್ ನಲ್ಲಿ ಇದಕ್ಕಿದ್ದಂತೆ ಗಂಗೆ ಮಾತೆ ಒನೆದು ರೈತರಲ್ಲಿ ಮಂದಹಾಸ ಮೂಡಿಸಿದೆ ಎಂದು ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳ ಜನರು ತಿಳಿಸಿದ್ದಾರೆ.