ಕರ್ಕಿ ಚಲನಚಿತ್ರಕ್ಕೆ ರಾಜ್ಯದಾದ್ಯಂತ ಉತ್ತಮ ಪ್ರತಿಕ್ರಿಯೆ

News Desk

ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ :
ಥರ್ಡ್ ಐ ಮೀಡಿಯಾ ಬ್ಯಾನರಿನಲ್ಲಿ ನಿರ್ಮಿಸಿರುವ ಕರ್ಕಿ ಚಲನಚಿತ್ರ ಸೆ.
20ರಂದು ಬಿಡುಗಡೆಯಾಗಿದು ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ ಎಂದು ನಿರ್ಮಾಪಕ ಪ್ರಕಾಶಕ ಪಳನಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಿನಿಮಾ ಸುಮಾರು 60 ಕೇಂದ್ರಗಳಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಕ್ಲಾಸ್ ಮತ್ತು ಮಾಸ್ ಎರಡೂ ಥರದ ಆಡಿಯನ್್ಸಗಳನ್ನು ಸೆಳೆದಿದೆ. ಸಿನಿಮಾ ತುಂಬಿದ ಪ್ರದರ್ಶನ ಕಾಣುತ್ತಿದ್ದು, ನಿಧಾನವಾಗಿ ಸಿನಿಮಾ ನೋಡಲು ಚಿತ್ರಮಂದಿರಗಳತ್ತ ಧಾವಿಸುತ್ತಿರುವ ಪ್ರೇಕ್ಷಕರ ಸಂಖ್ಯೆಯಲ್ಲೂ ಗಣನೀಯವಾಗಿ ಹೆಚ್ಚಿದೆ ಎಂದರು. 

ಸಿನಿಮಾಕ್ಕೆ ತಮಿಳಿನ ಖ್ಯಾತ ನಿರ್ದೇಶಕ ಪವಿತ್ರನ್ ಆಕ್ಷನ್ ಕಟ್ ಹೇಳಿದ್ದಾರೆ. ತಮಿಳಿನ ಪರಿಯೂರಮ್ ಪೆರುಮಾಳ್ಸಿನಿಮಾದ ರಿಮೇಕ್ ಆಗಿರುವ ಕನ್ನಡದ ಕರ್ಕಿಸಿನಿಮಾಕ್ಕೆ ತಮಿಳಿನ ನಿರ್ದೇಶಕ ಪವಿತ್ರನ್ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಮೂಲ ಸಿನಿಮಾ ತಮಿಳಿನಾದರೂ ಕರ್ಕಿಸಿನಿಮಾವನ್ನು ಕನ್ನಡದ ಪರಿಸರಕ್ಕೆ ತಕ್ಕಂತೆ ಚಿತ್ರಿಸಿ ತೆರೆಮೇಲೆ ತಂದಿರುವುದು ಈ ಸಿನಿಮಾದ ವಿಶೇಷ ಎಂದರು.

ಕರ್ಕಿ ಸಿನೆಮಾದಲ್ಲಿ ನಾಯಕ ನಟ ಜಯಪಕಾಶ್ (ಜೆ. ಪಿ) ರೆಡ್ಡಿ ಅವರಿಗೆ ಮಲೆಯಾಳಿ ಬೆಡಗಿ ಮೀನಾಕ್ಷಿ ನಾಯಕಿಯಾಗಿ ಜೋಡಿಯಾಗಿದ್ದಾರೆ. ಉಳಿದಂತೆ ಸಾಧುಕೋಕಿಲ, ಬಲರಾಜವಾಡಿ, ಯತಿರಾಜ್, ಮಿಮಿಕ್ರಿ ಗೋಪಿ, ಸ್ವಾತಿ, ಸವಿತಾ, ವಾಲೆ ಮಂಜು, ಜೋಸೈಮನ್ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ ಎಂದರು..

ಬಾಲನಟನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದ, ಈಗಾಗಲೇ ವಾಟ್ಸಪ್, ಲವ್, ‘ರಾಜರಾಣಿಸೇರಿದಂತೆ ಕೆಲ ಸಿನೆಮಾಗಳಲ್ಲಿ ನಾಯಕ ನಟನಾಗಿ ಅಭಿನಯಿಸಿದ ಜಯಪ್ರಕಾಶ್(ಜೆ.ಪಿ)ರೆಡ್ಡಿ, ‘ಕರ್ಕಿ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನೆಮಾದಲ್ಲಿ ಕಾನೂನು ಪದವಿಧರನಾಗಬೇಕು ಎಂಬ ಕನಸು ಇಟ್ಟುಕೊಂಡ ಹಳ್ಳಿ ಹುಡುಗನ ಪಾತ್ರದಲ್ಲಿ ಜೆ. ಪಿ ಅಭಿನಯಿಸಿದ್ದಾರೆ ಎಂದರು

ಹೃಷಿಕೇಶ ಛಾಯಾಗ್ರಹಣ, ಶ್ರೀ, ಕ್ರೇಜಿ ಮೈಂಡ್ಸ್ ಸಂಕಲನವಿದೆ. ಸಿನಿಮಾದ ಆರು ಹಾಡುಗಳಿಗೆ ಕವಿರಾಜ್ ಸಾಹಿತ್ಯವಿದ್ದು, ಅರ್ಜುನ, ಜನ್ಯ ಸಂಗೀತ ಸಂಯೋಜಿಸಿದ್ದಾರೆ ಎಂದರು.

ಶಿವಮೊಗ್ಗ, ದಾವಣಗೆರೆ, ಬಂಗಾರಪೇಟೆ, ಕೋಲಾರ, ಬಾಗಲಕೋಟೆ ಸುತ್ತಮುತ್ತ ಕರ್ಕಿಸಿನೆಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ ಎಂದು ವಿವರಿಸಿದರು.

- Advertisement -  - Advertisement - 
Share This Article
error: Content is protected !!
";