ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಚಳ್ಳಕೆರೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ದ್ವಿತೀಯ ಪಿ ಯು ಸಿ ಫಲಿತಾಂಶದಲ್ಲಿ ಶೇ 68 ರಷ್ಟು ಸಾಧನೆ ಮಾಡಿ ಸರ್ಕಾರಿ ಕಾಲೇಜುಗಳಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಪ್ರಯುಕ್ತ ಕಾಲೇಜು ವತಿಯಿಂದ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಜನಪ್ರಿಯ ಶಾಸಕ ಟಿ. ರಘುಮೂರ್ತಿ ರವರಿಗೆ ಶಾಸಕರ ಭವನದಲ್ಲಿ ಸಿಹಿ ನೀಡಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಸಿಹಿ ವಿತರಿಸಿ ಶಾಸಕರು ಮಾತನಾಡಿ ಈ ವರ್ಷದ ಫಲಿತಾಂಶ ನನಗೆ ಸಂತೋಷ ತಂದಿದೆ. ಮುಂದಿನ ವರ್ಷ ಇನ್ನೂ ಹೆಚ್ಚು ಫಲಿತಾಂಶ ಬರುವುದಕ್ಕೆ ಪ್ರಯತ್ನಿಸಿ ಎಂದು ಸಲಹೆ ನೀಡಿದರು. ಸರ್ಕಾರಿ ಕಾಲೇಜುಗಳಲ್ಲಿ ಹೆಚ್ಚಾಗಿ ಬಡ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿರುತ್ತಾರೆ. ಹಾಗಾಗಿ ನಾನು ಹೆಚ್ಚು ಸರ್ಕಾರಿ ಕಾಲೇಜುಗಳಿಗೆ ಆದ್ಯತೆ ನೀಡುತ್ತೇನೆ ಎಂದರು.
ಕಾಲೇಜಿನ ಪ್ರಾಚಾರ್ಯ ಕೆ ಎಚ್ ರಾಜು ಮಾತನಾಡಿ ಶಾಸಕರು ಕಾಲೇಜಿಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕೊಟ್ಟಿದ್ದಾರೆ ಅವರ ಮಾರ್ಗದರ್ಶನದಲ್ಲಿ ಮುಂದಿನ ವರ್ಷ ಉಪನ್ಯಾಸಕರ ಸಹಕಾರದಿಂದ ಇನ್ನೂ ಹೆಚ್ಚು ಫಲಿತಾಂಶ ಬರುವುದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಬ್ಲಾಕ್ ತಾಲೂಕ್ ಅಧ್ಯಕ್ಷ ವೀರಭದ್ರಪ್ಪ, ಗ್ಯಾರಂಟಿ ಯೋಜನೆಗಳ ತಾಲೂಕ್ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ರುದ್ರಮುನಿ, ಜಿಲ್ಲಾ ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್ ಲಕ್ಷ್ಮಣ, ಉಪನ್ಯಾಸಕರಗಳಾದ ಸಾಹಿತಿ ನಾಗರಾಜ್ ಬೆಳಗಟ್ಟ, ಎಚ್ ಆರ್ ಜಬಿವುಲ್ಲಾ, ತಿಪ್ಪೇಸ್ವಾಮಿ, ಪುಟ್ಟರಂಗಪ್ಪ, ಜಗದೀಶ್, ಚಂದ್ರಶೇಖರ್, ಶ್ರೀನಿವಾಸ್ ಇತರರು ಉಪಸ್ಥಿತರಿದ್ದರು.

