ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ರೇಟರ್‌ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಕೇಂದ್ರ ಎಂದು 5 ನಗರ ಪಾಲಿಕೆಗಳನ್ನು ರಚಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಉತ್ತಮ ಸೇವೆಗಳನ್ನು ನೀಡುವ ಹಾಗೂ ಅಭಿವೃದ್ಧಿಯನ್ನು ಮಾಡುವ ಉದ್ದೇಶದಿಂದಲೇ 5 ನಗರ ಪಾಲಿಕೆಗಳಾಗಿ ವಿಂಗಡಿಸಲಾಗಿದೆ.
ಈ 5 ನಗರ ಪಾಲಿಕೆಗಳ ವ್ಯಾಪ್ತಿಗೆ 27 ವಿಧಾನಸಭಾ ಕ್ಷೇತ್ರಗಳು ಹಾಗೂ 197 ವಾರ್ಡ್‌ಗಳು ಬರಲಿವೆ. ಬೆಂಗಳೂರು ಅಭಿವೃದ್ಧಿಯೇ ನಮ್ಮ ಮೊದಲ ಆದ್ಯತೆ! ಎಂದು ಡಿಸಿಎಂ ತಿಳಿಸಿದರು.

