ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಡಿ.ಎಂ.ನಂಜುಂಡಪ್ಪ ವರದಿ ಹಿನ್ನಲೆಯಲ್ಲಿ ಸರ್ಕಾರ ಅನುದಾನ ಬಿಡುಗಡೆ ಮಾಡಿದರೂ, ಈ ಅನುದಾನ ಅಧಿಕಾರ ಹಾಗೂ ಪ್ರಭಾವ ಹೊಂದಿರುವ ಸಚಿವರು ಹಾಗ ಶಕ್ತಿವಂತರ ಪಾಲಾಗುತ್ತಿದೆ.
ಅತ್ಯಂತ ಹಿಂದುಳಿದ ತಾಲ್ಲೂಕುಗಳಲ್ಲಿ ವಿಶೇಷ ಅಭಿವೃದ್ಧಿ ಕಾರ್ಯಕ್ರಮ ಹೆಸರಿಗಷ್ಟೇ ನೀಡುವಂತಾಗಿದೆ. ಯಾವುದೇ ಪ್ರಗತಿ ಕಾರ್ಯಗಳು ಆಗಿಲ್ಲ ಎಂದು ಮೊಳಕಾಲ್ಮೂರಿನ ಹಿರಿಯ ಶಾಸಕ ಗೋಪಾಲಕೃಷ್ಣ ಅಸಮಧಾನ ವ್ಯಕ್ತ ಪಡಿಸಿದರು.
ಕಲ್ಯಾಣ ಕರ್ನಾಟಕ ಭಾಗದ ಸಚಿವರು ಉತ್ತಮ ನೀರಾವರಿ ಯೋಜನೆಗಳನ್ನು ರೂಪಿಸಿ, ಕೋಟ್ಯಾಂತರ ರೂಪಾಯಿಗಳ ಅನುದಾನ ಪಡೆದು ಅನುಷ್ಠಾನಗೊಳಿಸಿದ್ದಾರೆ. ಆದರೆ ತಾಲ್ಲೂಕಿಗೆ ನೀರಾವರಿ ಯೋಜನೆ ತರವಲ್ಲಿ ಸಾಕಷ್ಟು ವಿಳಂಬವಾಯಿತು.
ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಅಭಿವೃದ್ಧಿಯಾಗಿಲ್ಲ. ಮಾನವೀಯ ನೆಲೆಗಟ್ಟಿನಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಅತ್ಯಂತ ಹಿಂದುಳಿದ ಮೊಳಕಾಲ್ಮೂರು ತಾಲ್ಲೂಕಿಗೆ ಹೆಚ್ಚಿನ ಅನುದಾನ ಶಿಫಾರಸ್ಸು ಮಾಡುವಂತೆ ಶಾಸಕ ಗೋಪಾಲಕೃಷ್ಣ ಹೇಳಿದರು.