ಸರ್ಕಾರಿ ನೌಕರರ ದಿನಾಚರಣೆ : ಸಾಂಕೇತಿಕ ಆಚರಣೆ

News Desk

 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ
ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ನಗರದ ರಾಜ್ಯ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಸೋಮವಾರದಂದು ಸಾಂಕೇತಿಕವಾಗಿ ಆಚರಿಸಲಾಯಿತು.

     ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ ಮುದ್ದಜ್ಜಿ ಅವರು, ಪ್ರತಿ ವರ್ಷ . 21 ರಂದು ಸರ್ಕಾರಿ ನೌಕರರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ.  ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಅದೇ ದಿನದಂದು ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡಲಾಗುತ್ತದೆ.  ಜಿಲ್ಲೆಯಲ್ಲಿ 2023-24 ಹಾಗೂ 2024-25 ನೇ ಸಾಲಿನದೂ ಸೇರಿದಂತೆ ಎರಡು ವರ್ಷಗಳ ಪ್ರಶಸ್ತಿ ನೀಡುವುದು ಬಾಕಿ ಇದೆ.

 ಜಿಲ್ಲಾ ಉಸ್ತುವಾರಿ ಸಚಿವರ ದಿನಾಂಕವನ್ನು ಪಡೆದು, ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ, ಜಿಲ್ಲಾ ಕೇಂದ್ರದಲ್ಲಿ ಬಾರಿ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಅದ್ಧೂರಿಯಾಗಿ ಶೀಘ್ರವೇ ಆಚರಿಸಲಾಗುವುದು.  ಇದೇ ಸಮಾರಂಭದಲ್ಲಿ ಎರಡೂ ವರ್ಷಗಳ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಕೂಡ ಜಿಲ್ಲಾ ಉಸ್ತುವಾರಿ ಸಚಿವರಿಂದಲೇ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

     ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಎಂ. ನಾರಾಯಣಸ್ವಾಮಿ, ಕಾರ್ಯದರ್ಶಿ ಆರ್. ಶ್ರೀನಿವಾಸ, ಖಜಾಂಚಿ ಮಲ್ಲಿಕಾರ್ಜುನ, ರಾಜ್ಯ ಪರಿಷತ್ ಸದಸ್ಯ ರಾಜಪ್ಪ ಎಸ್, ಉಪಾಧ್ಯಕ್ಷ ಪ್ರಕಾಶ್ ಕೆ., ಜಂಟಿಕಾರ್ಯದರ್ಶಿ ಮಾರುತಿ, ತಿಪ್ಪೇಸ್ವಾಮಿ ಸೇರಿದಂತೆ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

Share This Article
error: Content is protected !!
";