ಸರ್ಕಾರಿ ನೌಕರರ ಜಿಲ್ಲಾಧ್ಯಕ್ಷರ ಚುನಾವಣಾ ವೇಳಾ ಪಟ್ಟಿ ಪ್ರಕಟ

News Desk

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-29ನೇ ಸಾಲಿನ ಅವಧಿಗೆ ಚಿಕ್ಕಮಗಳೂರು ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆ ಪ್ರಕ್ರಿಯೆ ನವೆಂಬರ್-19 ರಿಂದ ಆರಂಭವಾಗಿ ಡಿಸೆಂಬರ್-4ರವರೆಗೆ ನಡೆಯಲಿದೆ ಎಂದು ಚುನಾವಣಾಧಿಕಾರಿ ಬಸವರಾಜಪ್ಪ ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರನ್ನು ಚುನಾವಣೆಯು ದಿನಾಂಕ 19/11/2024 ರಿಂದ ಪ್ರಾರಂಭವಾಗಿ ದಿನಾಂಕ 4/12/24 ರಂದು ಮುಕ್ತಾಯವಾಗಲಿದೆ. ಚುನಾವಣಾ ವೇಳಾ ಪಟ್ಟಿ ಚಿಕ್ಕಮಗಳೂರು ಸರ್ಕಾರಿ ನೌಕರರ ಭವನ, ಚಿಕ್ಕಮಗಳೂರು ಮೂಡಿಗೆರೆ ರಸ್ತೆಯ ಸಂಘದ ಕಚೇರಿಯಲ್ಲಿ ಪ್ರಕಟಿಸಲಾಗಿದೆ.

ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರ ಸ್ಥಾನಕ್ಕೆ ನವೆಂಬರ್-19 ರಿಂದ 27ರ ಸಂಜೆ 5ರೊಳಗೆ ನೇರವಾಗಿ ಚುನಾವಣಾಧಿಕಾರಿಗೆ/ ಸಹಾಯಕ ಚುನಾವಣಾಧಿಕರಿಗೆ ನಾಮಪತ್ರ ಸಲ್ಲಿಸಬಹುದಾಗಿದೆ. ನಾಮಪತ್ರಗಳ ಪರಿಶೀಲನೆ ನವೆಂಬರ್-28 ಬೆಳಗ್ಗೆ 11 ಗಂಟೆಯಿಂದ ನಡೆಯಲಿದ್ದು ಕಛೇರಿಯ ನೋಟೀಸ್ ಬೋರ್ಡಿನಲ್ಲಿ ನಿಯಮಾನುಸಾರ ಪ್ರಕಟಿಸಲಾಗುವುದು.

ನಾಮ ಪತ್ರ ಸಲ್ಲಿಸಿದವರು ಸ್ವ-ಇಚ್ಛೆಯಿಂದ ನೇರವಾಗಿ ಚುನಾವಣಾಧಿಕಾರಿ/ ಸಹಾಯಕ ಚುನಾವಣಾಧಿಕಾರಿ ಇವರಿಗೆ ಲಿಖಿತವಾಗಿ ನವೆಂಬರ್-29 ಸಂಜೆ 4.30 ಗಂಟೆಯವರೆಗೆ ನಾಮಪತ್ರಗಳನ್ನು ವಾಪಸ್ಸು ಪಡೆಯಬಹುದಾಗಿದೆ.

ಚುನಾವಣೆಯ ಕಣದಲ್ಲಿ ಉಳಿದ ಅಭ್ಯರ್ಥಿಗಳ ಹೆಸರು ಮತ್ತು ಇಲಾಖೆ ವಿವರದೊಂದಿಗೆ ಇದೇ ದಿನ ಸಂಜೆ 4.30 ಘಂಟೆಯ ನಂತರ ಸಂಘದ ಕಚೇರಿಯ ನೋಟಿಸ್ ಬೋರ್ಡಿನಲ್ಲಿ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಡಿಸೆಂಬರ್-4 ರಂದು ಬೆಳಿಗ್ಗೆ 9 ಗಂಟೆಯಿಂದ ಅಪರಾಹ್ನ 4 ಗಂಟೆಯವರಗೆ ಚಿಕ್ಕಮಗಳೂರಿನ ಸರ್ಕಾರಿ ನೌಕರರ ಭವನದಲ್ಲಿ ಮತದಾನ ನಡೆಯಲಿ.

ಮತದಾನ ಮುಕ್ತಾಯವಾದ ನಂತರ ಮತ ಎಣಿಕೆ ನಡೆಸಿ ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರ ಆಯ್ಕೆಯನ್ನು ನಿಯಮಾನುಸಾರ ಘೋಷಿಸಿ ಪ್ರಕಟಿಸಲಾಗುವುದು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗೆ ಚುನಾವಣಾಧಿಕಾರಿ/ ಸಹಾಯಕ ಚುನಾವಣಾಧಿಕಾರಿ ಇವರನ್ನು ಸಂಪರ್ಕಿಸಿ ಮಾಹಿತಿ ಪಡೆಯಲು ಚುನಾವಣಾಧಿಕಾರಿ ಎಸ್‌.ವಿ.ಬಸವರಾಜಪ್ಪ (9448829822) ಮನವಿ ಮಾಡಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";