ಸರ್ಕಾರಿ ನೌಕರರ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತುಮಕೂರಿನ ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಲಾದ ತುಮಕೂರು ಜಿಲ್ಲೆ ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಮಕ್ಕಳ ಪ್ರತಿಭಾ ಪುರಸ್ಕಾರ – 2025ರಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ, ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಸಂಸದ ಜಿ.ಎಸ್.ಬಸವರಾಜ್, ಶಾಸಕ ಜ್ಯೋತಿ ಗಣೇಶ್, ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಪಂ ಸಿಇಒ ಪ್ರಭು, ಅಶೋಕ್ ಕೆ.ವಿ., ಎನ್. ನರಸಿಂಹರಾಜು, ರಂಗಪ್ಪ, ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.

- Advertisement - 

Share This Article
error: Content is protected !!
";