ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024- 29ನೇ ಅವಧಿಯ ಚಿಕ್ಕಮಗಳೂರು ಜಿಲ್ಲಾ ಶಾಖೆಯ ಕಾರ್ಯಕಾರಿ ಸಮಿತಿಯ ನಿರ್ದೇಶಕರ ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡಿದೆ.
ಅ.28ರಿಂದ ನ.7ರ ಸಂಜೆ 5ರವರೆಗೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ. ನ.8ರಂದು ನಾಮಪತ್ರ ಪರಿಶೀಲಿಸಿ, ಅರ್ಹ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುವುದು.
ಉಮೇದುವಾರಿಕೆ ಹಿಂಪಡೆಯಲು ನ.11ರ ಸಂಜೆ 4.30 ಕೊನೆಯ ದಿನವಾಗಿದೆ. ನ.11ರ ಸಂಜೆ 5.30ರ ನಂತರ ಚುನಾವಣಾ ಕಣದಲ್ಲಿ ಉಳಿದ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುವುದು.
ನ.16ರಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ನಗರದಲ್ಲಿ ಚುನಾವಣೆ ನಡೆಯಲಿದೆ. ಮತದಾನ ಮುಕ್ತಾಯವಾದ ನಂತರ ಮತಗಳ ಎಣಿಕೆ ಕಾರ್ಯ ನಡೆಯಲಿದ್ದು, ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಫಲಿತಾಂಶ ಪ್ರಕಟಿಸಲಾಗುವುದು ಎಂದು ಚುನಾವಣಾಧಿಕಾರಿ ಎಸ್. ವಿ. ಬಸವರಾಜಪ್ಪ ತಿಳಿಸಿದ್ದಾರೆ.