ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತು ಸಮಗ್ರ ಸಮೀಕ್ಷೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಾಧ್ಯಮಗೋಷ್ಠಿಯಲ್ಲಿ ಪಾಲ್ಗೊಂಡರು.
ಮೂಲ ಜಾತಿಗಳ ದಾಖಲೀಕರಣ ಮತ್ತು ಒಳಮೀಸಲಾತಿ ವರ್ಗೀಕರಣಕ್ಕಾಗಿ ಇಂದಿನಿಂದ ಮೇ 23 ರವರೆಗೆ ಒಟ್ಟು ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿಗಳ ಗಣತಿ ನಡೆಯಲಿದೆ.
ಪ್ರತಿ ಮನೆಗೂ ಭೇಟಿ ನೀಡಿ, ಇ- ಆಡಳಿತ ಇಲಾಖೆ ಅಭಿವೃದ್ಧಿಪಡಿಸಿರುವ ಮೊಬೈಲ್ ಆ್ಯಪ್ ಮೂಲಕ 101 ಪರಿಶಿಷ್ಟ ಜಾತಿಯ ಕುಟುಂಬಗಳ ಮೂಲಜಾತಿ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ಔದ್ಯೋಗಿಕ ದತ್ತಾಂಶಗಳನ್ನು ಸಂಗ್ರಹಿಸಲಾಗುವುದು. ನಮ್ಮಸರ್ಕಾರ ಒಳಮೀಸಲಾತಿ ಜಾರಿಗೆ ಬದ್ಧವಾಗಿದೆ ಎಂದು ಶಿವಕುಮಾರ್ ತಿಳಿಸಿದರು.