ಸರ್ಕಾರಿ ಯೋಜನೆಗಳು ರೈತರಿಗೆ ಸುಲಭವಾಗಿ ದೊರೆಯಬೇಕು: ಶಾಸಕ ಶ್ರೀನಿವಾಸ್

News Desk

ಚಂದ್ರವಳ್ಳಿ ನ್ಯೂಸ್, ಕೂಡ್ಲಿಗಿ:
ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರ ಸಮಸ್ಯೆಗಳಿಗೆ ಧ್ವನಿಯಾಗುವ ನಿಟ್ಟಿನಲ್ಲಿ ಮನೆ ಮನೆಗೆ ಶಾಸಕರು ಎನ್ನುವ ವಿನೂತನ ಕಾರ್ಯಕ್ರಮಕ್ಕೆ ಶಾಸಕ ಡಾ. ಎನ್ ಟಿ ಶ್ರೀನಿವಾಸ್ ಚಾಲನೆ ನೀಡಿ ಹೇಳಿದರು.

ತಾಲೂಕಿನ ಸೋಲದಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮನೆ ಮನೆಗೆ  ಇ-ಸ್ವತ್ತು ವಿತರಣೆ, ಮನೆ ಬಾಗಿಲಿಗೆ ಸರ್ಕಾರದ ಸೌಲಭ್ಯಗಳು ದೊರೆಯಬೇಕು ಎಂದರು.

- Advertisement - 

ಶಾಲೆ ಪ್ರಾರಂಭೋತ್ಸವ ಅಂಗವಾಗಿ ಶಾಲೆಗಳಿಗೆ ಇ-ಸ್ವತ್ತು ವಿತರಣಾ ಕಾರ್ಯಕ್ರಮದ ಚಾಲನೆ ನೀಡಿದರು ಹಾಗೂ ಗ್ಯಾರಂಟಿ ಯೋಜನೆ ಸೇರಿದಂತೆ ಸರ್ಕಾರದ ಸವಲತ್ತುಗಳು ಸಾಮಾನ್ಯ ಜನರಿಗೆ ತಲುಪಿಸುವ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ನಿರುದ್ಯೋಗ, ವಸತಿ ಸೌಕರ್ಯಗಳನ್ನು ಹಂತಂತವಾಗಿ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಜೊತೆಗೆ ರಸ್ತೆ ಚರಂಡಿ ಮೂಲಭೂತ ಸೌಕರ್ಯಗಳಿಗೆ ಈಗಾಗಲೇ ಸಾಕಷ್ಟು ಅನುದಾನ ನೀಡಲಾಗಿದೆ ಎಂದರು. ಸಿಎಂ ಸಿದ್ದರಾಮಯ್ಯ ಸೇರಿದಂತೆ ಉಸ್ತುವಾರಿ ಸಚಿವರು ನನಗೆ ವಿಶೇಷ ಒತ್ತು ನೀಡಿ ಹೆಚ್ಚಿನ ಅನುದಾನ ನೀಡಿದ್ದಾರೆ. ನವೆಂಬರ್-9ರಂದು ಕ್ಷೇತ್ರದ ದಶಕಗಳ ಬೇಡಿಕೆಯಾದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಉದ್ಘಾಟನೆಗೆ ಮುಖ್ಯಮಂತ್ರಿಗಳು ಆಗಮಿಸಲಿದ್ದಾರೆ ಎಂದು ಹೇಳಿದರು.

- Advertisement - 

ಕ್ಷೇತ್ರ ಶಿಕ್ಷಣ ಅಧಿಕಾರಿ ಮೈಲೇಶ್ ಬೇಗೂರ್ ಪ್ರಸ್ತಾವಿಕವಾಗಿ ಮಾತನಾಡಿ ಕ್ಷೇತ್ರದ ಶಾಸಕರ ಬದ್ಧತೆಯಿಂದಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಶುರುವಾಗಿದೆ. ಮನೆ ಮನೆಗೂ ಶಾಸಕರು ವಿನೂತನವಾಗಿ ಕಾರ್ಯಕ್ರಮ ಶಾಸಕರ ಕನಸಿನ ಕಾರ್ಯಕ್ರಮವಾಗಿದೆ ಎಂದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ವಿ.ಕೆ ನೇತ್ರಾವತಿ, ಪಟ್ಟಣ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನರಸಪ್ಪ, ಗ್ರಾಮ ಪಂಚಾಯತಿ ಅಧ್ಯಕ್ಷೆ ಭೋವಿ ರತ್ನಮ್ಮ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಶಾಮಪ್ಪ, ಸರ್ಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ಶ್ರೀಕಂಠಪುರ ವೆಂಕಟೇಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕ್ ಅಧ್ಯಕ್ಷ ಮೊಹಮ್ಮದ್ ಜಿಲಾನ್,

ಪಟ್ಟಣ ಪಂಚಾಯತಿ ತಾಲೂಕು ಅಧ್ಯಕ್ಷ ಶಿವಪ್ಪ ಕಾವಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರುಸಿದ್ದನಗೌಡ್ರು, ಕಾಂಗ್ರೆಸ್ ಮುಖಂಡರಾದ ಶಶಿಧರ್, ಕೆ ಸಿದ್ದಪ್ಪ, ನಾಗರಿಕಟ್ಟಿ ರಾಜಣ್ಣ, ಅಜ್ಜನಗೌಡ್ರು, ಹೆಚ್ ರಾಜಪ್ಪ, ಅಗ್ರಹಾರ ಧಾರಕಪ್ಪ, ಕಾಲಿ ಸಿದ್ದಪ್ಪ, ಹುಲಿರಾಜ್, ಸಿದ್ದಬಸಪ್ಪ, ತಾಲೂಕ್ ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು ಎಂದು ಸಿ ಅರುಣ್ ಕುಮಾರ್ ತಿಳಿಸಿದ್ದಾರೆ.

Share This Article
error: Content is protected !!
";