ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿ ದೀಕ್ಷಿತ ಮೂರು ಪಂದ್ಯದಲ್ಲಿ ಪ್ರಥಮ ಸ್ಥಾನ: ಮುಖ್ಯ ಶಿಕ್ಷಕಿ ಕವಿತಾ

News Desk

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿ ದೀಕ್ಷಿತ ಮೂರು ಪಂದ್ಯದಲ್ಲಿ ಪ್ರಥಮ ಸ್ಥಾನ: ಮುಖ್ಯ ಶಿಕ್ಷಕಿ ಕವಿತಾ
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ತಾಲ್ಲೂಕಿನ ತಳಕು ಹೋಬಳಿಯ ರೇಣುಕಾಪುರ ಕ್ಲಸ್ಟರ್‌ನ ಬಸಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿ ಎ.ದೀಕ್ಷಿತ ೧೦೦ ಮೀಟರ್ ಓಟ, ತಟ್ಟೆ ಎಸೆತ, ಗುಂಡು ಎಸೆತ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ಶಾಲೆಗೂ ಗ್ರಾಮಕ್ಕೂ ಕೀರ್ತಿತಂದಿದ್ಧಾಳೆಂದು ಶಾಲೆಯ ಮುಖ್ಯ ಶಿಕ್ಷಕಿ ಬಿ.ಕವಿತಾ ಸಂತಸ ವ್ಯಕ್ತಪಡಿಸಿದರು.

ಶಾಲೆಯಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಎ.ದೀಕ್ಷಿತಳನ್ನು ಅಭಿನಂದಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಮುಕ್ತಾಯವಾದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಎ.ದೀಕ್ಷಿತ ಉತ್ತಮ ಆಟ ಪ್ರದರ್ಶಿಸುವ ಮೂಲಕ ಮೂರು ಪ್ರಶಸ್ತಿಗಳನ್ನು ಪಡೆದು ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಸ್ಪೂರ್ತಿಯಾಗಿದ್ಧಾಳೆ. ವಿಶೇಷವಾಗಿ ನಮ್ಮ ಶಾಲೆಗೆ ಮೂರು ವಿಭಾಗದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಬಂದಿರುವುದು ಸಂತಸ ತಂದಿದೆ. ಶಾಲೆಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಓದಿನ ಜೊತೆಗೆ ಪಠ್ಯೇತರ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚು ಅವಕಾಶವನ್ನು ಕಲ್ಪಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಜೆ.ರಾಜು, ಟಿ.ಸಿರಿಯಣ್ಣ, ವಿದ್ಯಾರ್ಥಿಯ ತಂದೆ ಡಿ.ಏಸು, ತಾಯಿ ತುಪ್ಪದಮ್ಮ, ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜು, ಉಪಾಧ್ಯಕ್ಷೆ ಚನ್ನಮ್ಮ ಮುಂತಾದವರು ಉಪಸ್ಥಿತರಿದ್ದರು.

- Advertisement -  - Advertisement - 
Share This Article
error: Content is protected !!
";