ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ!
ಚAದ್ರವಳ್ಳಿ ನ್ಯೂಸ್, ಬೆಂಗಳೂರು
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅಂತಿಮವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.
ಹಲವು ಸಲಹೆಗಳನ್ನು ನೀಡಲಾಗಿದ್ದು ಈ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. ಈ ಹಿಂದೆಯೂ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರಾಜ್ಯಪಾಲರ ಅನುಮೋದನೆಗಾಗಿ ಮೈಕ್ರೋ ಸುಗ್ರೀವಾಜ್ಞೆಯನ್ನು ಕಳುಹಿಸಿತ್ತು. ಆದರೆ ರಾಜಭವನ ಕೆಲ ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಿತ್ತು.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಅಂಕುಶ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತರಲು ಮುಂದಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಹಲವಾರು ಜನ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಡಿವಾಣ ಹಾಕಲು ಮುಂದಾಗಿದೆ. ಮುಂದಿನ ಅಧಿವೇಶನದಲ್ಲಿ ಅದರ ಸಾಧಕ ಮತ್ತು ಬಾಧಕಗಳ ಬಗ್ಗೆ ಸಮಗ್ರವಾಗಿ ಚರ್ಚೆ ಮಾಡುವ ನಿರ್ಧಾರ ಮಾಡಬೇಕಿದೆ.