ಜನಗಣತಿಯಲ್ಲಿ ಮಾದಿಗ ಸಮುದಾಯಕ್ಕೆ ಅನ್ಯಾಯ- ಗೋವಿಂದ ಕಾರಜೋಳ

News Desk

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ರಾಜ್ಯದಲ್ಲಿ ಸರ್ಕಾರ ಇತ್ತೀಚೆಗೆ ನಡೆಸಿದ ಜನ ಗಣತಿಯಲ್ಲಿ ಮಾದಿಗ ಸಮುದಾಯವೂ ಸಹ ಅಸಮದಾನ ವ್ಯಕ್ತಪಡಿಸಿದೆ. ಕರ್ನಾಟಕದಲ್ಲಿ ಸುಮಾರು ೬೦ ಲಕ್ಷಕ್ಕೂ ಹೆಚ್ಚು ಮಾದಿಗ ಸಮುದಾಯವಿದೆ. ಮತ್ತೊಮ್ಮೆ ಒಳ ಮೀಸಲಾತಿಗಾಗಿ ಜನಗಣತಿ ನಡೆಯಲಿದ್ದು ಮಾದಿಗ ಸಮಾಜದ ಎಲ್ಲಾ ಬಂಧುಗಳು ಜನಗಣತಿಯಲ್ಲಿ ಮಾದಿಗ ಎಂದು ಬರೆಸಬೇಕಿದೆ ಎಂದು ಲೋಕಸಭಾ ಸದಸ್ಯ ಗೋವಿಂದ ಎಂ.ಕಾರಜೋಳ ಕರೆ ನೀಡಿದರು.

ಅವರು, ಶುಕ್ರವಾರ ಅಭಿಷೇಕ ನಗರದಲ್ಲಿ ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬುಜಗಜೀವನರಾಮ್ ಜನ್ಮದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಾನು ಸಹ ಮಾದಿಗ ಸಮುದಾಯದ ಪರವಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಯವರಿಗೆ ಒಳಮೀಸಲಾತಿ ಜಾರಿಮಾಡಬೇಕೆಂದು ಒತ್ತಾಯಿಸಲಾಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನಮಾನಸದ ನಾಯಕರಾಗಿದ್ದಾರೆ. ಒಳಮೀಸಲಾತಿ ಜಾರಿ ಕುರಿತಂತೆ ಸಂಸದ ಗೋವಿಂದ ಕಾರಜೋಳ ಸರ್ಕಾರವನ್ನು ಒತ್ತಾಯಿಸುವಂತೆ ವಿನಂತಿಸಿದ್ದಾರೆ. ನಾನು ಸಹ ಅವರ ಮಾತಿಗೆ ಧ್ವನಿಗೂಡಿಸುತ್ತೇನೆ. ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಜಾರಿಗೆ ತರುವ ನಿಟ್ಟಿನಲ್ಲಿ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡಲಿದೆ ಎಂದರು.

ನಗರಸಭೆ ಅಧ್ಯಕ್ಷ ಆರ್.ಮಂಜುಳಾ, ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಮಲ್ಲಿಕಾರ್ಜುನ್, ಉಪಾಧ್ಯಕ್ಷೆ ಸುಮಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವೀರಭದ್ರಯ್ಯ, ಡಿಎಸ್‌ಎಸ್ ಸಂಘಟನೆಯ ನೇತಾರರಾದ ಟಿ.ವಿಜಯಕುಮಾರ್, ಹೊನ್ನೂರುಸ್ವಾಮಿ, ಭೀಮನಕೆರೆಶಿವಮೂರ್ತಿ, ಪ್ರಕಾಶ್, ಕೋಟ್ರೇಶ್, ಚಂದ್ರು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಳೆಮಂಡಿರಾಮದಾಸ್, ಯುವಮುಖಂಡ ಕೆ.ಟಿ.ಕುಮಾರಸ್ವಾಮಿ, ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಶಿವಣ್ಣ, ಚನ್ನಗಾನಹಳ್ಳಿಮಲ್ಲೇಶ್ ಮುಂತಾದವರು ಉಪಸ್ಥಿತರಿದ್ದರು.

 

Share This Article
error: Content is protected !!
";