ರೈತರ ಶೋಷಣೆ ತಪ್ಪಿಸಲು ಡಿಜಿಟಲೀಕರಣ ಮಾಡುತ್ತಿರುವ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರೈತರಿಗಾಗುತ್ತಿರುವ ಶೋಷಣೆಗಳನ್ನು ತಪ್ಪಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮಹತ್ವದ ನಿರ್ಧಾರ ಮಾಡಿದೆ ಎಂದು ಕಾಂಗ್ರೆಸ್ ತಿಳಿಸಿದೆ.

ಜನವರಿ 1 ರಿಂದ ಈವರೆಗಿನ ಎಲ್ಲಾ ಭೂ-ಮಂಜೂರು ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲು ನಿರ್ಧರಿಸಿದ ಕಂದಾಯ ಇಲಾಖೆ.

ನಮೂನೆ 50-53 ರ ಅಡಿ ಭೂ ಮಂಜೂರು ಪಡೆಯದವರೂ ಸಹ ನಕಲಿ ದಾಖಲೆ ಸೃಷ್ಟಿ ಮಾಡಿದ್ದು, ಕೆಲವರು ದಾಖಲೆ ಬಚ್ಚಿಟ್ಟು ರೈತರಿಗೆ ಸಮಸ್ಯೆ ನೀಡುತ್ತಿದ್ದಾರೆ. ಬಗರ್‌ಹುಕುಂ ಯೋಜನೆ ಅಡಿಯಲ್ಲಿ ಭೂ ಮಂಜೂರು ಮಾಡಿರುವವರಿಗೆ ದಾಖಲೆ ಇಲ್ಲದಂತಾಗಿದೆ. ಈ ಸಮಸ್ಯೆ ನಿವಾರಿಸಲು ಸರ್ಕಾರದಿಂದ ಭೂ ದಾಖಲೆಗಳ ಡಿಜಿಟಲೀಕರಣದ ನಿರ್ಧಾರ ಮಾಡಿದೆ ಎಂದು ಕಾಂಗ್ರೆಸ್ ತಿಳಿಸಿದೆ.

 

 

 

- Advertisement -  - Advertisement - 
Share This Article
error: Content is protected !!
";