ಗ್ರಾಮ ಪಂಚಾಯಿತಿ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಚುನಾವಣಾ ಆಯೋಗವು ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.

- Advertisement - 

ಚುನಾವಣಾ ವೇಳಾಪಟ್ಟಿ ವಿವರ ಇಂತಿದೆ. ಮೇ 08 ರಿಂದ 28 ರವರೆಗೆ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಮೇ.08ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು.

- Advertisement - 

ಮೇ.14 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಮೇ.15ರಂದು ನಾಮಪತ್ರಗಳ ಪರಿಶೀಲನೆ, ಮೇ.17 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ಮೇ.25ರಂದು ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನ ನಡೆಸಲಾಗುವುದು.

ಮರು ಮತದಾನದ ಅವಶ್ಯಕತೆ ಇದ್ದರೆ ಮೇ.27ರಂದು ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನ ನಡೆಸಲಾಗುವುದು. ಮೇ.28ರಂದು ಬೆಳಿಗ್ಗೆ 8 ಗಂಟೆಯಿಂದ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುವುದು. ಮೇ.28ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

- Advertisement - 

Share This Article
error: Content is protected !!
";