ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎಲ್ಲಾದರು ಇರು ಎಂತಾದರು ಇರು
ಎಂದೆಂದಿಗೂ ನೀ ಕನ್ನಡವಾಗಿರು
ಕನ್ನಡವೇ ಸತ್ಯ ಕನ್ನಡವೇ ನಿತ್ಯ
–ರಾಷ್ಟ್ರಕವಿ ಕುವೆಂಪು
ಗುಜರಾತ್ ರಾಜ್ಯದ ಅಹ್ಮದಾಬಾದ್ ಕರ್ನಾಟಕ ಸಂಘ ಹಮ್ಮಿಕೊಂಡಿದ್ದ ೭೦ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡಿಗರಾದ ಗುಜರಾತ್ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿ ಎನ್.ಎಸ್. ಸಂಜಯ್ ಗೌಡ ಅವರೊಂದಿಗೆ ಬಹಳ ಸಂತೋಷದಿಂದ ಭಾಗಿಯಾದೆ ಎಂದು ಕೇಂದ್ರ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.
ಕನ್ನಡಿಗರು ಕರ್ನಾಟಕ ಬಿಟ್ಟು ಎಲ್ಲೂ ಹೊರಗೆ ಹೋಗುವುದಿಲ್ಲ ಎನ್ನುವ ನಂಬಿಕೆ ಹುಸಿ ಮಾಡಿ, ಗುಜರಾತ್ ನಲ್ಲಿ ಬದುಕು ಕಟ್ಟಿಕೊಂಡು ಸ್ವಾತಂತ್ರ್ಯ ಪೂರ್ವಕಾಲದಿಂದಲೂ ಕನ್ನಡ ಸೇವೆ ಮಾಡಿಕೊಂಡು ಬರುತ್ತಿರುವ ಈ ಸಂಘದ ಬಗ್ಗೆ ನನ್ನಲ್ಲಿ ಅಪಾರ ಗೌರವಭಾವ, ಅಭಿಮಾನ ಮೂಡಿದೆ. ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯವೇ ಸರಿ ಎಂದು ಕುಮಾರಸ್ವಾಮಿ ಅವರು ಭಾವುಕರಾದರು.

ಸಂಘದ ಅಧ್ಯಕ್ಷ ಹೆಚ್.ವಿ. ಬೆಣ್ಣೂರ, ಪ್ರಧಾನ ಕಾರ್ಯದರ್ಶಿ ಸುಮನಲಾಲ್ ಕೊಡಿಯಾಲ್ ಬೇಲ್, ಗಾಂಧೀನಗರ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಕಮಲೇಶ್ ಸೇರಿ ಸಂಘದ ಇತರ ಪದಾಧಿಕಾರಿಗಳು, ಅಸಂಖ್ಯಾತ ಹೊರನಾಡ ಕನ್ನಡಿಗರು, ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

